ಕಿರಿಮಂಜೇಶ್ವರ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಲಕ್ಷ ಬಿಲ್ವಾರ್ಚನೆ ಸೇವೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಿರಿಮಂಜೇಶ್ವರ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಸಂಭ್ರಮದಿಂದ ನಡೆಯಿತು. ಮಹಾಶಿವರಾತ್ರಿ ಉತ್ಸವದ ಪ್ರಯುಕ್ತ ದೇವಸ್ಥಾನದ ಅರ್ಚಕ ರಾಮಕೃಷ್ಣ ಭಟ್ ಇವರ ನೇತೃತ್ವದಲ್ಲಿ ದೇವರಿಗೆ ಬಿಲ್ವಾರ್ಚನೆ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ರಾತ್ರಿ ವಿಶೇಷವಾಗಿ ಲಕ್ಷ ಬಿಲ್ವಾರ್ಚನೆ ಸೇವೆ ನಡೆಯಿತು .

Call us

Click Here

ಉತ್ಸವದ ಪ್ರಯುಕ್ತ ವಿವಿಧ ಬಗೆಯ ಅಂಗಡಿ ಮುಂಗಟ್ಟುಗಳು ಆಗಮಿಸಿದ್ದು, ರಥಬೀದಿಯ ಉದ್ದಗಲಕ್ಕೂ ಹಬ್ಬದ ವಾತಾವರಣ ನಿರ್ಮಾಣವಾಯಿತು. ದೇವಸ್ಥಾನ ಹಾಗೂ ರಥಬೀದಿಯಲ್ಲಿ ವಿಶೇಷವಾದ ವಿದ್ಯುತ್ ಅಲಂಕಾರ, ಹೂವಿನ ಅಲಂಕಾರ, ಮಧ್ಯಾಹ್ನ ಮತ್ತು ಸಂಜೆ ಎರಡು ಹೊತ್ತು ಫಲಹಾರದ ವ್ಯವಸ್ಥೆ ಮಾಡಲಾಗಿತ್ತು. ಸಾಗರೋಪಾದಿಯಾಗಿ ಸಾವಿರಾರು ಮಂದಿ ಭಕ್ತರು ಆಗಮಿಸಿ ದೇವರ ಪ್ರಸಾದವನ್ನು ಸ್ವೀಕರಿಸಿದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಕಾಶ ಐತಾಳ್ ಮಹಾಶಿವರಾತ್ರೋತ್ಸವು ಅದ್ದೂರಿಯಾಗಿ ನಡೆಯಲು ಸಹಕರಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆಯನ್ನು ತಿಳಿಸಿದರು. ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಜಯ್ ಪೂಜಾರಿ ಕೊಡೇರಿ, ಮಂಜುನಾಥ ಪಿ. ಗಂಗೇಬೈಲು, ಲಕ್ಷ್ಮಣ್ ದೇವಾಡಿಗ ಆಕಳಬೈಲು, ಮಂಜುನಾಥ ಬೈಪಾಸ್, ಗ್ರಾಪಂ ಸದಸ್ಯರಾದ ರಮೇಶ್ ಖಾರ್ವಿ, ಮಹೇಶ್ ದೇವಾಡಿಗ, ರಮೇಶ್ ನಾಯರಿ, ದೇವಸ್ಥಾನದ ಉತ್ಸವದ ಉಸ್ತುವಾರಿ ವಹಿಸಿದ್ದರು.

Leave a Reply