ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಯಡ್ತರೆ ಫ್ರೆಂಡ್ಸ್ ಆಶ್ರಯದಲ್ಲಿ ಬೈಂದೂರು ತಾಲೂಕು ಮಟ್ಟದ ಕು ಮಟ್ಟದ 30 ಗಜಗಳ ಕ್ರಿಕೆಟ್ ಪಂದ್ಯಾಟ ‘ಯಡ್ತರೆ ಟ್ರೋಫಿ – 2023’ ಫೆ.25 ಹಾಗೂ 26ರಂದು ಎರಡು ದಿನಗಳ ಕಾಲ ಯಡ್ತರೆ ಕ್ರೀಡಾಂಗಣದಲ್ಲಿ ಜರುಗಲಿದೆ.
ಫೆ.25ರ ಬೆಳಿಗ್ಗೆ ಪಂದ್ಯಾಟ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ. ಫೆ.26ರ ಸಂಜೆ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಸಮಾರೋಪ ಸಮಾರಂಭ ಜರುಗಲಿದ್ದು, ವಿಜೇತ ತಂಡಗಳಿಗೆ ಬಹುಮಾನ ವಿತರಣೆ ನಡೆಯಲಿದೆ. ಈ ವೇಳೆ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮವಾಗಿ ನೃತ್ಯ ವೈವಿಧ್ಯ, ಹಾಸ್ಯಮಯ ನಗೆ ನಾಟಕ ಪ್ರದರ್ಶನಗೊಳ್ಳಲಿದೆ.