ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನೆಹರು ಯುವ ಕೇಂದ್ರ ಉಡುಪಿ ಹಾಗೂ ಯುವಕಾರ್ಯ ಕ್ರೀಡಾಲಯ ಇವರ ಪ್ರಾಯೋಜಕತ್ವದಲ್ಲಿ ಕುಂದಾಪುರ ಭoಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಮೂರು ದಿನಗಳ ಯುವ ನಾಯಕತ್ವ ಮತ್ತು ಸಮುದಾಯ ಬೆಳವಣಿಗೆ ಶಿಬಿರ ಕಾಲೇಜಿನ ಎ ವಿ ಹಾಲ್ ನಲ್ಲಿ ಉದ್ಘಾಟನೆಗೊಂಡಿತು.
ಕುಂದಾಪುರದ ಸಹಾಯಕ ಆಯುಕ್ತರಾದ ರಶ್ಮಿ ಆರ್. ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ನಾಯಕತ್ವ ಶಿಬಿರದ ಅಗತ್ಯತೆ ಹಾಗೂ ಅದರ ಉಪಯುಕ್ತತೆ ಬಗ್ಗೆ ಶಿಬಿರಾರ್ಥಿಗಳಿಗೆ ತಿಳಿಸಿ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತ ಮಂಡಳಿಯ ಹಿರಿಯ ಸದಸ್ಯರಾದ ಶಾಂತಾರಾಮ ಪ್ರಭು ಇವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ ನಾರಾಯಣ ಶೆಟ್ಟಿ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ಹಾಗೂ ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ ಅರುಣ್ ಎ. ಎಸ್. ಹಾಗೂ ರಾಮಚಂದ್ರ ಆಚಾರ್ ಸಭೆಯಲ್ಲಿಯಲ್ಲಿ ಉಪಸ್ಥಿತರಿದ್ದರು.
ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಯಾಗಿರುವ ವಿಲ್ಫ್ರೆಡ್ ಡಿಸೋಜ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಬಿರಾರ್ಥಿ ಪ್ರಜ್ವಲ್ ವಂದಿಸಿದರು ಹಾಗೂ ಶಿಬಿರಾರ್ಥಿ ಸುಶ್ಮಿತಾ ಕಾರ್ಯಕ್ರಮ ನಿರ್ವಹಿಸಿದರು.ವಿವಿಧ ಕಾಲೇಜಿನ 45 ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಭಾಗವಹಿಸಿದ್ದಾರೆ.










