ಮುಷ್ಕರ ವಾಪಸ್ ಪಡೆದ ಸರ್ಕಾರಿ ನೌಕರರು – ತಕ್ಷಣ ಕರ್ತವ್ಯಕ್ಕೆ ಹಾಜರಾಗಲು ಸೂಚನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳವನ್ನು ಏಪ್ರಿಲ್ 1 ರಿಂದ ಜಾರಿಗೆ ತರಲಾಗುವುದು ಎಂದು ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಅಧಿಕೃತ ಆದೇಶದ ಬೆನ್ನಲ್ಲೇ ಅನಿರ್ದಿಷ್ಟ ಮುಷ್ಕರವನ್ನು ತಕ್ಷಣ ವಾಪಸ್ ತೆಗೆದುಕೊಂಡಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದರು.

Call us

Click Here

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 1ರಿಂದ ಶೇ.17ರಷ್ಟು ವೇತನ ಹೆಚ್ಚಿಸಿ ಎಂದು ಸರ್ಕಾರ ಆದೇಶ ನೀಡಿದೆ. ಈ ಸರ್ಕಾರದ ಆದೇಶವನ್ನು ಸಾಮೂಹಿಕವಾಗಿ ಒಪ್ಪಿಕೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಭರವಸೆಗಳು ಸಿಗುತ್ತವೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ವಾಪಸ್ ಪಡೆದಿದ್ದೇವೆ ಎಂದು ಮಾಹಿತಿ ನೀಡಿದರು.

ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿ, 17% ವತನ ಹೆಚ್ಚಳ ಮಾಡುವುದಾಗಿ ತಿಳಿಸಿದರು. ಇದೀಗ ಸಿಎಂ ಸೂಚನೆ ಮೇರೆಗೆ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸರ್ಕಾರ, 1018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ಸರ್ಕಾರಿ ನೌಕರರಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡುವುದಾಗಿ ತಿಳಿಸಿದೆ.

ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿರುವುದಾಗಿ ತಿಳಿಸಲಾಗಿದೆ.

Click here

Click here

Click here

Click Here

Call us

Call us

Leave a Reply