Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‘ಬುಕ್ ಬ್ರಹ್ಮ’ ಕಥಾ ಸ್ಪರ್ಧೆ & ಕಾದಂಬರಿ ಪುರಸ್ಕಾರ 2023. ರೂ. 2 ಲಕ್ಷ 69 ಸಾವಿರ ಬಹುಮಾನ!
    ಊರ್ಮನೆ ಸಮಾಚಾರ

    ‘ಬುಕ್ ಬ್ರಹ್ಮ’ ಕಥಾ ಸ್ಪರ್ಧೆ & ಕಾದಂಬರಿ ಪುರಸ್ಕಾರ 2023. ರೂ. 2 ಲಕ್ಷ 69 ಸಾವಿರ ಬಹುಮಾನ!

    Updated:01/03/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ, ಮಾ.01:
    ಭಾರತದ ಸ್ವಾತಂತ್ರ್ಯೋತ್ಸವ ಮತ್ತು ಸಂಸ್ಥೆಯ ನಾಲ್ಕನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಬುಕ್ ಬ್ರಹ್ಮ “ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ”ಯ ಜೊತೆಗೆ 2022ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿಗೆ ಪುರಸ್ಕಾರ ನೀಡಲು ನಿರ್ಧರಿಸಿದೆ.

    Click Here

    Call us

    Click Here

    2022ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಒಂದು ಲಕ್ಷದಲ್ಲಿ 75 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ವಿತರಿಸಲಾಗುತ್ತದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ಈ ಪೈಕಿ 3 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 2 ಸಾವಿರ ರೂಪಾಯಿಗಳನ್ನು ಪ್ರಕಾಶಕರಿಗೂ ನೀಡಲಾಗುತ್ತದೆ.

    ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಕಥೆಗೆ 50 ಸಾವಿರ ರೂಪಾಯಿ ನಗದು ಬಹುಮಾನ ಇರಲಿದೆ. ದ್ವೀತಿಯ ಸ್ಥಾನ ಪಡೆಯುವ ಕಥೆಗೆ 25 ಸಾವಿರ ರೂಪಾಯಿ, ತೃತೀಯ ಸ್ಥಾನಕ್ಕೆ 15 ಸಾವಿರ ರೂಪಾಯಿ ನಗದು ಬಹುಮಾನ ಇರಲಿದೆ. ಉಳಿದಂತೆ ಐದು ಕಥೆಗಳಿಗೆ ತಲಾ 5 ಸಾವಿರ ನಗದನ್ನು ಒಳಗೊಂಡ ಸಮಾಧಾನಕರ ಬಹುಮಾನ ಹಾಗೂ ಅಂತಿಮ ಸುತ್ತಿಗೆ ಆಯ್ಕೆಯಾಗುವ ಉಳಿದ17 ಕಥೆಗಳಿಗೆ ತಲಾ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ. ಆಯ್ಕೆಯಾದ ಈ 25 ಕಥೆಗಳನ್ನು ಒಳಗೊಂಡ ಪುಸ್ತಕ ಪ್ರಕಟಿಸಲಾಗುತ್ತದೆ.

    ಬುಕ್ ಬ್ರಹ್ಮ ಕಾದಂಬರಿ ಪುರಸ್ಕಾರ 2023ರ ನಿಯಮಗಳು:

    1. ಕಾದಂಬರಿಯು ಸ್ವತಂತ್ರವಾಗಿರಬೇಕು ಮತ್ತು 2022ರಲ್ಲಿ ಮೊದಲ ಮುದ್ರಣಗೊಂಡಿರಬೇಕು.
    2. ಅನುವಾದ ಹಾಗೂ ಭಾಷಾಂತರಗೊಂಡ ಕಾದಂಬರಿಗಳನ್ನು ಪರಿಗಣಿಸುವುದಿಲ್ಲ.
    3. ಸ್ಪರ್ಧೆಗೆ ಲೇಖಕರು/ ಪ್ರಕಾಶಕರು ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಕಳುಹಿಸಬೇಕು.
    4. ತೀರ್ಪುಗಾರರ ನಿರ್ಣಯವೇ ಅಂತಿಮ.
    5. ಕಾದಂಬರಿಗಳನ್ನು ಕಳುಹಿಸಲು ಏಪ್ರಿಲ್ 15, 2023 ಕೊನೆಯ ದಿನ.
    6. ಕನ್ನಡದ ಪ್ರಮುಖ ಕಾದಂಬರಿಕಾರರು ಹಾಗೂ ವಿಮರ್ಶಕರು ಸ್ಪರ್ಧೆಯ ನಿರ್ಣಾಯಕರಾಗಿರುತ್ತಾರೆ.
    7. ಆಯ್ಕೆಗೆ ಸಂಬಂಧಿಸಿದಂತೆ ’ಬುಕ್ ಬ್ರಹ್ಮ’ ಆಡಳಿತ ಮಂಡಳಿಯ ನಿರ್ಣಯವೇ ಅಂತಿಮ.
    8. ಆಗಸ್ಟ್ 1, 2023 ಮಂಗಳವಾರದಂದು ಅಂತಿಮ ಸುತ್ತನ್ನು ಪ್ರವೇಶಿಸುವ 5 ಕಾದಂಬರಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು.
    9. ಆಗಸ್ಟ್ 15, 2023 ಮಂಗಳವಾರದಂದು ನಡೆಯಲಿರುವ ಸಮಾರಂಭದಲ್ಲಿ ಕಥೆಗಳ ಘೋಷಣೆ ಮತ್ತು ಪ್ರಶಸ್ತಿ ವಿತರಣೆ ಎರಡನ್ನೂ ಮಾಡಲಾಗುವುದು.
    10. ಬುಕ್ಬ್ರಹ್ಮ ಪ್ರೈವೇಟ್ ಲಿಮಿಟೆಡ್ (Book Brahma Pvt. Ltd.), ಫರ್ಬೆಂ
      ಡನ್ ಕಮ್ಯುನಿಕೇಷನ್ ಪ್ರೈವೇಟ್ ಲಿಮಿಟೆಡ್ (Verbinden Communication Pvt. Ltd.) ಮತ್ತು ಕಾಗ್ನಿಕ್ವೆಸ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ (Cogniquest Technologies Pvt. Ltd.) ಸಂಸ್ಥೆಯ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಸ್ಫರ್ಧೆಯಲ್ಲಿ ಭಾಗವಹಿಸುವಂತಿಲ್ಲ.
    11. ಅಂತಿಮ ಸುತ್ತಿಗೆ ಆಯ್ಕೆಯಾದ ಕಾದಂಬರಿಕಾರರು ಬಹುಮಾನ ವಿತರಣಾ ಸಮಾರಂಭದಲ್ಲಿ ತಪ್ಪದೇ ಭಾಗವಹಿಸಬೇಕು. ಸಮಾರಂಭದ ದಿನ ಬೆಳಿಗ್ಗೆ ನಡೆಯುವ ʻಕಥಾ-ಕಾದಂಬರಿ ಸಂವಾದ’ದಲ್ಲಿ ಭಾಗವಹಿಸುವುದು ಅಪೇಕ್ಷಣೀಯ.
    12. ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ – ಕನ್ನಡ, ಮೂರನೇ ಮಹಡಿ, ಆರ್. ಕೆ ಕಾಂಪ್ಲೆಕ್ಸ್, ಕೆಎಸ್ಎಸ್ಐಡಿಸಿ ಕಾಂಪೌಂಡ್, ಎಲೆಕ್ಟ್ರಾನಿಕ್ಸ್ ಸಿಟಿ ಮೊದಲ ಹಂತ, ಬೆಂಗಳೂರು-560100 ವಿಳಾಸಕ್ಕೆ ಏಪ್ರಿಲ್ 15ರೊಳಗೆ ಕಳುಹಿಸಬೇಕು.

    ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 78926 08118

    Click here

    Click here

    Click here

    Click Here

    Call us

    Call us

    ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2023ರ ನಿಯಮಗಳು:

    1. ಕಥೆಯು ಸ್ವತಂತ್ರವಾಗಿರಬೇಕು. ಅನುವಾದ, ಅನುಕರಣವಾಗಿರಬಾರದು.
    2. ಕಥೆಯು ಅಪ್ರಕಟಿತವಾಗಿರಬೇಕು. ಮುದ್ರಣ ಅಥವಾ ಯಾವುದೇ ವಿದ್ಯುನ್ಮಾನ ಮಾಧ್ಯಮ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರಬಾರದು.
    3. ಕಥೆಗೆ ಯಾವುದೇ ರೀತಿಯ ಪದಮಿತಿ ಇರುವುದಿಲ್ಲ.
    4. ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ವಯಸ್ಸಿನ ನಿರ್ಬಂಧ ಇಲ್ಲ
    5. ಹಸ್ತಪ್ರತಿ ಅಥವಾ ಟೈಪ್ ಮಾಡಿದ ಕಥೆಯಿರುವ ಪುಟಗಳಲ್ಲಿ ತಮ್ಮ ಹೆಸರನ್ನು ದಾಖಲಿಸಬಾರದು. ಕಥೆ ಮುಗಿದ ನಂತರ ಪ್ರತ್ಯೇಕ ಪುಟದಲ್ಲಿ ತಮ್ಮ ಹೆಸರು, ಪೂರ್ಣ ವಿಳಾಸ ಮತ್ತು ಮೊಬೈಲ್ ಸಂಖ್ಯೆ ಇರಬೇಕು.
    6. ಕಥೆಗಾರರು ನಿಬಂಧನೆಗಳಿಗೆ ಒಪ್ಪಿದ ಮತ್ತು ಸಹಿ ಮಾಡಿದ ಪ್ರತ್ಯೇಕ ಒಂದು ಪತ್ರ ಇಡಬೇಕು.
    7. ಬುಕ್ಬ್ರಹ್ಮ ಪ್ರೈವೇಟ್ ಲಿಮಿಟೆಡ್ (Book Brahma Private Limited), ಫರ್ಬೆಂಡನ್ ಕಮ್ಯುನಿಕೇಷನ್ ಪ್ರೈವೇಟ್ ಲಿಮಿಟೆಡ್ (Verbinden Communication Private Limited) ಮತ್ತು ಕಾಗ್ನಿಕ್ವೆಸ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ (Cogniquest Technologies Private Limited) ಸಂಸ್ಥೆಯ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಸ್ಫರ್ಧೆಯಲ್ಲಿ ಭಾಗವಹಿಸುವಂತಿಲ್ಲ.
    8. ಕನ್ನಡದ ಪ್ರಮುಖ ಕಥೆಗಾರರು/ವಿಮರ್ಶಕರು ಸ್ಪರ್ಧೆಯ ನಿರ್ಣಾಯಕರಾಗಿರುತ್ತಾರೆ.
    9. ಆಯ್ಕೆಗೆ ಸಂಬಂಧಿಸಿದಂತೆ ʻಬುಕ್ ಬ್ರಹ್ಮ’ ಆಡಳಿತ ಮಂಡಳಿಯ ನಿರ್ಣಯವೇ ಅಂತಿಮ.
    10. ಕಥೆಗಳನ್ನು ಕಳುಹಿಸಲು ಕೊನೆಯ ದಿನ ಬುಧವಾರ, ಮೇ 31, 2023.
    11. ಆಗಸ್ಟ್ 1, 2023 ರಂದು ಮಂಗಳವಾರ, ಅಂತಿಮ ಸುತ್ತನ್ನು ಪ್ರವೇಶಿಸುವ 25 ಕಥೆಗಳ ಪಟ್ಟಿಯನ್ನು ಪ್ರಕಟಿಸಲಾಗುವುದು.
    12. ಆಗಸ್ಟ್ 15, 2023 ರಂದು ಮಂಗಳವಾರ, ನಡೆಯಲಿರುವ ಸಮಾರಂಭದಲ್ಲಿ ಅಂತಿಮ ಸುತ್ತಿಗೆ ಆಯ್ಕೆಯಾದ ಕಥೆಗಳ ಘೋಷಣೆ ಮತ್ತು ಪ್ರಶಸ್ತಿ ವಿತರಣೆ ಎರಡನ್ನೂ ಮಾಡಲಾಗುವುದು.
    13. ಅಂತಿಮ ಸುತ್ತಿಗೆ ಆಯ್ಕೆಯಾದ 25 ಕಥೆಗಳನ್ನು ಪುಸ್ತಕ, ಇ-ಪುಸ್ತಕ, ಆಡಿಯೋ ಪುಸ್ತಕದ ರೂಪದಲ್ಲಿ ಪ್ರಕಟಿಸಲಾಗುತ್ತದೆ. ಈ 25 ಕಥೆಗಳ ಪೈಕಿ ಬಹುಮಾನ ಪಡೆಯದೇ ಉಳಿಯುವ 17 ಕಥೆಗಳಿಗೆ ತಲಾ 2000 ರೂಪಾಯಿ ಗೌರವಧನ ನೀಡಲಾಗುವುದು. ಈ ಎಲ್ಲಾ 25 ಕಥೆಗಳ ಹಕ್ಕುಸ್ವಾಮ್ಯ ಕಥೆಗಾರರು ಮತ್ತು ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಇಬ್ಬರಿಗೂ ಜಂಟಿಯಾಗಿ (ಶೇಕಡಾ 50) ಸೇರಿರುತ್ತದೆ.
    14. ಅಂತಿಮ ಸುತ್ತಿಗೆ ಆಯ್ಕೆಯಾದ ಕಥೆಗಾರರು ಬಹುಮಾನ ವಿತರಣಾ ಸಮಾರಂಭದಲ್ಲಿ ತಪ್ಪದೇ ಭಾಗವಹಿಸಬೇಕು. ಸಮಾರಂಭದ ದಿನ ಬೆಳಿಗ್ಗೆ ನಡೆಯುವ ʻಕಥಾ-ಕಾದಂಬರಿ ಸಂವಾದ’ದಲ್ಲಿ ಭಾಗವಹಿಸುವುದು ಅಪೇಕ್ಷಣೀಯ.
    15. ಒಬ್ಬರು ಒಂದು ಕಥೆಯನ್ನು ಮಾತ್ರ ಕಳಿಸಬೇಕು. ಕಾದಂಬರಿ ಸ್ಪರ್ಧೆಗೆ ಪುಸ್ತಕ ಕಳುಹಿಸಿದವರೂ ಕೂಡ ಕಥೆಗಳನ್ನು ಕಳುಹಿಸಬಹುದು.
    16. ಕಥೆಗಳನ್ನು ಈ-ಮೇಲ್ ಮೂಲಕ (ನುಡಿ/ಯೂನಿಕೋಡ್ ಫಾಂಟ್ ಬಳಸಿ ಟೈಪ್ ಮಾಡಿದ ಪ್ರತಿ) bbks2023@bookbrahma.com ಅಥವಾ ಹಸ್ತಪ್ರತಿಯನ್ನು ಪ್ರಧಾನ ಸಂಪಾದಕರು, ಬುಕ್ ಬ್ರಹ್ಮ ಕನ್ನಡ, ಮೂರನೇ ಮಹಡಿ, ಆರ್ ಕೆ ಕಾಂಪ್ಲೆಕ್ಸ್ ಕೆಎಸ್ಎಸ್ಐಡಿಸಿ ಕಾಂಪೌಂಡ್, ಎಲೆಕ್ಟ್ರಾನಿಕ್ಸ್ ಸಿಟಿ ಮೊದಲ ಹಂತ, ಬೆಂಗಳೂರು-560100 ಕ್ಕೆ ಕಳುಹಿಸಿಕೊಡಬಹುದು.

    ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: 78926 08118

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    14 − 7 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.