Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆಳ್ಳಿ ಮಹೋತ್ಸವ ಸಂಭ್ರಮದಲ್ಲಿ ಕರ್ನಾಟಕ ಮಹಿಳಾ ಯಕ್ಷಗಾನ ತಂಡ
    ತನ್ನಿಮಿತ್ತ

    ಬೆಳ್ಳಿ ಮಹೋತ್ಸವ ಸಂಭ್ರಮದಲ್ಲಿ ಕರ್ನಾಟಕ ಮಹಿಳಾ ಯಕ್ಷಗಾನ ತಂಡ

    Updated:07/03/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಚೈತ್ರ ರಾಜೇಶ್ ಕೋಟ | ಕುಂದಾಪ್ರ ಡಾಟ್ ಕಾಂ
    ಗತಕಾಲದ ಪರಂಪರೆಯ ಹಿರಿಮೆ, ದೈವೀ ಕಲೆಯೆಂಬ ಗರಿಮೆ, ಬಣ್ಣ-ಭಿನ್ನಾಣಗಳ ಕಲಾತ್ಮಕ ಕುಲುಮೆ, ಪುರಾಣ-ಇತಿಹಾಸಗಳ ಗೊಂಚಲಿನ ಮಹಿಮೆಯಿರುವ ಕರಾವಳಿ ಭಾಗದ ದೈವಿಕ ಕಲೆ ಹಾಗೂ ಕರ್ನಾಟಕದ ಶ್ರೀಮಂತ ಕಲೆ ಯಕ್ಷಗಾನ. ಭಾಗವತಿಕೆ-ಚಂಡೆ-ಮದ್ದಲೆಗಳ ಝೆಂಕಾರದ ನಡುವೆ ಹೆಜ್ಜೆ-ಗೆಜ್ಜೆಗಳ ವೈಭವದ ಜೊತೆಗೆ ವೇಷಭೂಷಣ ಎಲ್ಲರನ್ನು ಬಹುಬೇಗ ಆಕರ್ಷೀಸುವುದು ಈ ಕಲೆಯ ಸಾಮರ್ಥ್ಯ. ಬಹಳ ಹಿಂದಿನಿಂದಲೂ ಗಂಡುಕಲೆ ಎಂದೇ ಪ್ರಚಲಿತದಲ್ಲಿದ್ದರೂ ಹೆಣ್ಣು ಕೂಡ ಗೆಜ್ಜೆ ಕಟ್ಟಿ ಹೆಜ್ಜೆ ಹಾಕಬಲ್ಲಳು ಎಂದು ಇತ್ತೀಚೆಗೆ ಅನೇಕ ಮಹಿಳೆಯರು ಸಾಬೀತು ಪಡಿಸಿದ್ದಾರೆ. ಆದರೆ 1998ರ ಸುಮಾರಿನ ಆ ಕಾಲದಲ್ಲಿ ಹೆಣ್ಣು ಗೆಜ್ಜೆ ಕಟ್ಟಿ ಕುಣಿಯುವುದು ಸ್ವಲ್ಪ ಕಷ್ಟದ ಪರಿಸ್ಥಿಯೇ ಇತ್ತು. ಈ ಸವಾಲುಗಳ ಮಧ್ಯದಲ್ಲೇ ಬೆಂಗಳೂರಿನಂತಹ ಮಹಾನಗರದಲ್ಲಿ ಮಹಿಳೆಯರನ್ನು ಒಗ್ಗೂಡಿಸಿ, ತರಬೇತಿ ನೀಡಿ ಮಹಿಳೆಯರು ಯಕ್ಷಗಾನವನ್ನು ಮಾಡಬಲ್ಲರು ಎಂದು ತೋರಿಸಿ ಸಾಧಿಸಿದವರು ಗೌರಿ ಕೆ. ಇವರ ಪತಿ ಶ್ರೀನಿವಾಸ ಸಾಸ್ತಾನ ಯಕ್ಷಗಾನ ಗುರು ಮತ್ತು ಕಲಾವಿದರಾಗಿದ್ದರು. ಇವರ ಯಕ್ಷಗಾನ ತಂಡವನ್ನು ನೋಡಿ, ಪ್ರೇರಿತರಾಗಿ ಪುರುಷರಿಗಷ್ಟೇ ಸೀಮಿತವಾದ ಯಕ್ಷಗಾನವನ್ನು ಮಹಿಳೆಯರೂ ಮಾಡುವಲ್ಲಿ ಯಾಕೆ ಪ್ರಯತ್ನ ಪಡಬಾರದು? ಮಹಿಳೆಯರಿಂದ ಅಸಾಧ್ಯವಾದದ್ದು ಏನೂ ಇಲ್ಲ, ಎಂಬ ನಿಟ್ಟಿನಲ್ಲಿ “ಕರ್ನಾಟಕ ಮಹಿಳಾ ಯಕ್ಷಗಾನ” ಎಂಬ ತಂಡವನ್ನು ಕಟ್ಟಿದರು.

    Click Here

    Call us

    Click Here

    ಗೌರಿ ಅವರು ಪ್ರಸ್ತುತ ಜೆ.ಪಿ ನಗರದ ಆರ್ ಬಿ ಐ ಲೇಔಟ್ ನಲ್ಲಿ ತಮ್ಮ ಮನೆಯಲ್ಲಿ ಯಕ್ಷಗಾನದ ತರಬೇತಿ ನೀಡುತ್ತಿದ್ದಾರೆ. ವೃತ್ತಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಆಗಿದ್ರೂ, ಇವರನ್ನು ಅತೀ ಹೆಚ್ಚು ಆಕರ್ಷಿಸಿದ್ದು ಯಕ್ಷಗಾನವಂತೆ. ಈಗ ನಿವೃತ್ತಿಯ ಜೀವನದಲ್ಲೂ ಈ ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆಗೀನ ಕಾಲದಲ್ಲಿ ಮಹಿಳಾ ತಂಡವನ್ನು ಕಟ್ಟಿ ಬೆಳೆಸುವುದು ಕಷ್ಟವೇ ಆಗಿದ್ದರೂ, ಎದೆಗುಂದದೇ ಮುನ್ನಡೆಸುತ್ತಾ ಬಂದಿದ್ದಾರೆ. ಈ ಮಹಿಳಾ ತಂಡ ಪ್ರಸ್ತುತ 25ನೇ ವರ್ಷಕ್ಕೆ ಕಾಲಿಡುತ್ತಿರುವುದು ಸಂತಸದ ವಿಚಾರ. ಕಲೆ ಯಾರೊಬ್ಬರ ಸ್ವತ್ತಲ್ಲ ಯಾರು ಅದನ್ನು ಆಸಕ್ತಿಯಿಟ್ಟುಕೊಂಡು, ಸತತ ಪರಿಶ್ರಮ ಪಟ್ಟು ಕಲಿಯುತ್ತಾರೋ ಅವರಿಗೆ ಖಂಡಿತ ಕಲೆ ಒಲಿಯುತ್ತದೆ ಎನ್ನುವುದಕ್ಕೆ ಈ ತಂಡವೇ ಪ್ರತ್ಯಕ್ಷ ಸಾಕ್ಷಿ.

    ಹೆಜ್ಜೆ-ಗೆಜ್ಜೆಗಳ ಸಮ್ಮಿಲನ, ಗಾನ-ನಾಟ್ಯಗಳ ಸಂಚಲನ, ವೇಷಭೂಷಣಗಳ ಸಂಕಲನ, ಚಂಡೆ-ಮದ್ದಲೆಗಳ ಹೊಮ್ಮಿಲನದ ಈ ಯಕ್ಷಗಾನ ನಮ್ಮನ್ನು ಸೆಳೆಯುವಂತೆ ಮಾಡುತ್ತದೆ. ಪುರುಷರಿಗಷ್ಟೇ ಈ ಯಕ್ಷಗಾನ ಒಲಿಯುವುದು ಎನ್ನುವವರ ಎದುರು ಪುಂಡುವೇಷದಿಂದ ಹಿಡಿದು ರಾಜ ಗಾಂಭೀರ್ಯವಿರುವ ಎಲ್ಲಾ ರೀತಿ ಪಾತ್ರಗಳನ್ನು ಮಾಡಿ ತೋರಿಸಿದವರು. ನಾಟ್ಯದಿಂದ ಹಿಡಿದು ಸಂಭಾಷಣೆಯಲ್ಲೂ ಹೊಸ ಸಂಚಲನವನ್ನು ಮೂಡಿಸಿ, ಯಕ್ಷಪ್ರೇಮಿಗಳನ್ನು ಆಕರ್ಷಿಸಿದವರು. ರಾಮಾಯಣ, ಮಹಾಭಾರತ, ಪುರಾಣಗಳ ಪ್ರಸಂಗಗಳನ್ನು ಪ್ರದರ್ಶಿಸಿದ್ದಲ್ಲದೇ, ಸಾಮಾಜಿಕ ಸಂದೇಶಗಳನ್ನೊಳಗೊಂಡ ಅನೇಕ ಪ್ರಸಂಗಗಳನ್ನು ರಚಿಸಿ, ಪ್ರದರ್ಶಿಸಿ ಉತ್ತಮ ಪ್ರತಿಕ್ರಿಯೆ ಪಡೆದಿದೆ ಈ ತಂಡ. ಕನ್ನಡ ಭಾಷೆಯಲ್ಲೇ ನಡೆಯುವ ಯಕ್ಷಗಾನವನ್ನು ಕನ್ನಡೇತರರು ನೋಡಲಿ ಎಂದು ಹಿಂದಿ, ಇಂಗ್ಲೀಷ್ ಭಾಷೆಯಲ್ಲೂ ಯಕ್ಷಗಾನವನ್ನು ಪ್ರದರ್ಶಿಸಿದ್ದಾರೆ. ಕೋಟ ಶಿವರಾಮ ಕಾರಂತರ ‘ಯಕ್ಷಗಾನ ಬ್ಯಾಲೆ’ ಎಂಬ ವಿಶೇಷ ಪ್ರಯೋಗವನ್ನು ಪ್ರದರ್ಶನ ರೂಪದಲ್ಲಿ ನೀಡಿ, ಯಕ್ಷ ಪ್ರೇಮಿಗಳಿಂದ ಭೇಷ್ ಎನಿಸಿಕೊಂಡಿದ್ದಾರೆ. ಯುವ ಪೀಳಿಗೆಗೆ ಯಕ್ಷಗಾನದ ಪರಿಚಯವಾಗಲಿ ಎಂಬ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಪ್ರದರ್ಶನ ನೀಡಿ, ಕಲೆಯನ್ನು ಬೆಳೆಸುವಲ್ಲಿ ಸಾಕ್ಷಿಯಾಗಿದ್ದಾರೆ.

    ಇಲ್ಲಿ ಯಾರೂ ವೃತ್ತಿಪರ ಕಲಾವಿದರಿಲ್ಲ, ಎಲ್ಲರೂ ಕಲೆಯ ಮೇಲಿನ ಪ್ರೀತಿಯಿಂದ ಯಕ್ಷಗಾನವನ್ನು ಅಪ್ಪಿಕೊಂಡವರೇ ಇರೋದು. ತಮ್ಮ ವೃತ್ತಿಯಲ್ಲಿ ಬೇರೆ ಬೇರೆ ಸ್ಥಾನವನ್ನು ಹೊಂದಿದವರು, ಯಕ್ಷಗಾನದಲ್ಲೂ ತಮಗೆ ಕೊಟ್ಟ ಪಾತ್ರಕ್ಕೆ ಉತ್ತಮ ಸ್ಥಾನ ಕೊಟ್ಟು ಪಾತ್ರಕ್ಕೆ ಜೀವ ತುಂಬುವ ಮಹಿಳಾ ಮಣಿಗಳು ಅದೆಷ್ಟೋ ಇಲ್ಲಿದ್ದಾರೆ. ಕರ್ನಾಟಕ ಮಾತ್ರವಲ್ಲದೇ ಕಡಲಿನಾಚೆಗೂ ಈ ಕರುನಾಡ ಕಲೆಯನ್ನು ಕೊಂಡೊಯ್ದಿದ್ದಾರೆ. ಚೀನಾದ ನಂಜಿಂಗ್ ಸ್ಟೇಡಿಯಂ, ಅಮೇರಿಕಾದ ಅಕ್ಕ ಸಮ್ಮೇಳನ, ಲಾಸ್ ಎಂಜಲೀಸ್, ಜರ್ಮನಿಯ ಬರ್ಲಿನ್, ದುಬೈನ್ ನ ಇಂಡಿಯನ್ ಎಕ್ಸ್ಪೋ-2020 ಸೇರಿದಂತೆ, ಭಾರತದ ನಾನಾ ಭಾಗಗಳಲ್ಲೂ ಕಾರ್ಯಕ್ರಮ ನೀಡಿದ್ದಾರೆ. ಚಂಡೀಗಡ, ತಂಜಾವೂರು, ಒಡಿಸ್ಸಾ, ಚೆನೈ, ದೆಹಲಿ, ಶ್ರವಣಬೆಳಗೊಳ,ಮಂಡಿ, ಬೀದರ್, ಹಂಪಿ ಉತ್ಸವ, ಜಾನಪದ ಜಾತ್ರೆ, ಬೆಂಗಳೂರು ಹಬ್ಬ, ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ, ಮೈಸೂರು ಉತ್ಸವ, ಅಖಿಲ ಕರ್ನಾಟಕ ಜೈನ ಮಹಿಳಾ ಉತ್ಸವ, ಸಹ್ಯಾದ್ರಿ ಉತ್ಸವ, ಸುವರ್ಣ ಕರ್ನಾಟಕ ಉತ್ಸವ, ಮಹಿಳಾ ಯಕ್ಷಗಾನ ಉತ್ಸವ, ಮೈಸೂರು ದಸರಾ ಹೀಗೆ ಬರೆಯುತ್ತಾ ಹೋದರೆ ಇವರು ನೀಡಿದ ಕಾರ್ಯಕ್ರಮದ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಸಾವಿರಕ್ಕೂ ಅಧಿಕ ಕಾರ್ಯಕ್ರಮ. ಅದು ಬೇರೆ ಬೇರೆ ರಾಜ್ಯ ಹಾಗೂ ದೇಶದಲ್ಲಿ ಎನ್ನುವುದು ಇವರ ಸಾಧನೆಯ ಮಟ್ಟವನ್ನು ಎತ್ತಿ ತೋರಿಸುತ್ತದೆ. ಇದಲ್ಲದೇ ಆಕಾಶವಾಣಿ, ದೂರದರ್ಶನದಲ್ಲೂ ಇವರ ಕಾರ್ಯಕ್ರಮ ಪ್ರಸಾರವಾಗಿ ವೀಕ್ಷಕರ ಮೆಚ್ಚುಗೆಯ ಮಾತಿಗೆ ಸಾಕ್ಷಿಯಾಗಿದೆ. ಗೌರಿ ಇವರ ಸಾಧನೆಗೆ ಸಂದ ಪ್ರಶಸ್ತಿ-ಪುರಸ್ಕಾರಗಳ ಪಟ್ಟಿ ಕೂಡ ಹೆಮ್ಮರವಾಗಿ ಬೆಳೆಯುತ್ತಲೇ ಇದೆ.

    ಚೈತ್ರ ರಾಜೇಶ್ ಕೋಟ

    ಪಾರಂಪರಿಕ ರಂಗ ಕಲೆಗಳ ಅನನ್ಯತೆ, ನೈಜತೆ, ಶ್ರೇಷ್ಠತೆಗೆ ಯಾವುದೇ ಕುತ್ತು ಬಾರದಂತೆ ಪಾರಂಪರಿಕ ಪ್ರಸಂಗಕ್ಕೆ ಅನುಗುಣವಾದ ವೇಷಭೂಷಣಗಳನ್ನು ರಂಗದಲ್ಲಿ ವಿಜೃಂಭಿಸುವ ಚಾಕಚಕ್ಯತೆಯನ್ನು ಈ ಮಹಿಳಾ ತಂಡ ಹೊಂದಿದೆ. ಒಟ್ಟಿನಲ್ಲಿ ಮಹಿಳೆಯರು ಮನಸ್ಸು ಮಾಡಿದರೆ ಏನೂ ಕೂಡ ಸಾಧಿಸಬಹುದೆಂದು ತೋರಿಸುವಲ್ಲಿ ಕರ್ನಾಟಕ ಮಹಿಳಾ ಯಕ್ಷಗಾನ ತಂಡ ಕೂಡ ಸಾಕ್ಷಿಯಾಗಿದೆ. ಯಕ್ಷಗಾನಂ ಗೆಲ್ಗೆ ಎಂದು ಹೇಳುವುದು ಮಾತ್ರವಲ್ಲ, ಯಕ್ಷಗಾನ ಗಲ್ಲಿ-ಗಲ್ಲಿಗೆ ಪ್ರದರ್ಶನವಾದಾಗಲೇ ಈ ಕಲೆ ಇನ್ನಷ್ಟು ಬೆಳೆಯಲು ಸಾಧ್ಯವಾಗುತ್ತದೆ. ಕಲೆ ಬೆಳೆಯಬೇಕಾದರೆ ಕಲಾವಿದರು ಬೆಳೆಯಬೇಕು, ಕಲಾವಿದರು ಬೆಳೆಯಬೇಕಾದರೆ ಪ್ರೇಕ್ಷಕರ ಸಂಖ್ಯೆ ಹೆಚ್ಚಾಗಿ ಅವರ ಪ್ರಶಂಸೆಯಿಂದ ಕಲಾವಿದ ಬೆಳೆಯಲು ಸಾಧ್ಯ. ಇಂತಹ ಕಲಾವಿದರ ಮೇಲೆ ನಿಮ್ಮೆಲ್ಲರ ಸಹಕಾರ, ಹಾರೈಕೆ ಸದಾ ಇರಲಿ.. ಹಿಂದಿನ ಪರಿಸ್ಥಿತಿಗೆ ಹೋಲಿಸಿದರೆ ಮಹಿಳೆಯರ ಸ್ಥಾನಮಾನ ಇಂದು ಪುರುಷರಿಗೆ ಸರಿ ಸಮಾನವಾಗಿದೆ. ಹಾಗಾಗಿ ಈಗೀನ ಸ್ಮರ್ಧಾತ್ಮಕ ಯುಗದಲ್ಲೀ ಬರೀ ಕೆಲಸದ ಒತ್ತಡ ಹಾಗೂ ಮನೆಯ ಜವಾಬ್ದಾರಿಗಳ ನಡುವೆ ಕುಗ್ಗದೇ, ಇಂತಹ ಕಲೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಮಹಿಳೆ ಇನ್ನಷ್ಟು ಬೆಳೆಯಬಹುದು. ಸ್ತ್ರೀ ಅಬಲೆ ಅಲ್ಲ, ಸಬಲೆ ಎನ್ನುವ ಸಾಲಿಗೆ ಅರ್ಥ ತುಂಬಲು ಸಾಧ್ಯ.

    Click here

    Click here

    Click here

    Call us

    Call us

    • ಗೌರಿ ಕೆ : 9448503817, 6366776663

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶರನ್ನವರಾತ್ರಿ: ದೇವಿಯ ಒಂಭತ್ತು ಸ್ವರೂಪಗಳ ಮಹತ್ವ

    22/09/2025

    ಬೆಳಕ ಚಿತ್ರಿಸಿದ ಕ್ಷಣಗಳ ಹಬ್ಬ – ವಿಶ್ವ ಛಾಯಾಗ್ರಹಣ ದಿನ

    19/08/2025

    ಮುಖದ ಸೌಂದರ್ಯ ಹೆಚ್ಚಿಸಲು ಫೇಶಿಯಲ್‌ ಯೋಗ ಎಂಬ ಟ್ರೆಂಡ್

    11/04/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ
    • ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d