ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ, ಗ್ರಾಮ ಪಂಚಾಯತ್ ಮರವಂತೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ, ಆಸರೆ ಚಾರಿಟೇಬಲ್ ಟ್ರಸ್ಟ್ (ರಿ) ಮರವಂತೆ, ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ಇಲ್ಲಿ ಕೆ ಎಂ ಸಿ ಮಣಿಪಾಲದ ಖ್ಯಾತ ದಂತ ವೈದ್ಯರ ತಂಡದಿಂದ ಉಚಿತ ದಂತ ಚಿಕಿತ್ಸಾ ಶಿಬಿರ ಜರುಗಿತು.
ಕಾರ್ಯಕ್ರಮವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ಗಣೇಶ್ ಭಟ್ ಉದ್ಘಾಟಿಸಿದರು. ದಂತ ಚಿಕಿತ್ಸೆಯ ಕುರಿತು ಡಾ. ರಾಜಾರಾಮ್ ಶೆಟ್ಟಿ ಮಾಹಿತಿಯನ್ನು ನೀಡಿದ್ದಾರೆ, ಕೆಎಂಸಿ ಮಣಿಪಾಲ ಆಸ್ಪತ್ರೆಯ ಡಾ. ಹರಿಣಿ ಇವರು ಶಿಬಿರದ ಬಗ್ಗೆ ಮಾಹಿತಿಯನ್ನು ನೀಡಿದರು.
ರೋಟರಿ ಕ್ಲಬ್ ಅಧ್ಯಕ್ಷ ವೆಂಕಟೇಶ್ ನಾವುಂದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಗಣೇಶ್ ಐತಾಳ್, ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ಆಸರೆ ಚಾರಿಟೇಬಲ್ ಟ್ರಸ್ಟ್ ನ ರಾಜೇಶ್ ಆಚಾರ್ಯ ಗ್ರಾಮ ಪಂಚಾಯತ ಸದಸ್ಯರಾದ ಕರುಣಾಕರ್ ಆಚಾರ್ಯ ಉಪಸ್ಥಿತರಿದ್ದರು.
ರಾಜಾರಾಮ್ ಸ್ವಾಗತಿಸಿ, ಹುಲಿಯಪ್ಪ ಗೌಡ್ರು ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು ಸುಮಾರು 125 ಅಧಿಕ ಮಂದಿ ಇದರ ಪ್ರಯೋಜನವನ್ನು ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.