Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ
    ಉಡುಪಿ ಜಿಲ್ಲೆ

    ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬ್ರಹ್ಮಾವರ:
    ಆಡಳಿತ ವ್ಯವಸ್ಥೆಯು ಜನಸಾಮಾನ್ಯರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಅತ್ಯಂತ ಪ್ರಮುಖ ಭಾಗವಾಗಿ ಕಾರ್ಯನಿರ್ವಹಿಸುವ ಮೂಲಕ ಜನಸ್ನೇಹಿಯಾಗಿರಬೇಕು ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಬ್ರಹ್ಮಾವರದಲ್ಲಿ ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

    ಸಾರ್ವಜನಿಕರ ಬಹುತೇಕ ಸಮಸ್ಯೆಗಳು ಕಂದಾಯ ಇಲಾಖೆಗೆ ಸಂಬಂಧಪಟ್ಟಿದ್ದು. ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆಯಿಂದ ಕಾರ್ಯ ನಿರ್ವಹಿಸಿ, ಸಮಸ್ಯೆಗಳನ್ನು ಶೀಘ್ರದಲ್ಲಿ ಇತ್ಯರ್ಥಪಡಿಸುವ ಮೂಲಕ ಜನಪರ ಕೆಲಸಗಳನ್ನು ಮಾಡುವ ಮನೋಭಾವವನ್ನು ಸಿಬ್ಬಂದಿಗಳು ಬೆಳೆಸಿಕೊಳ್ಳುವಂತೆ ತಿಳಿಸಿದರು.

    ಉಡುಪಿ ಜಿಲ್ಲೆಯಲ್ಲಿ ಡೀಮ್ಡ್ ಅರಣ್ಯ ವಿನಾಯತಿಯ ನಂತರ ಕಂದಾಯ ಇಲಾಖೆಗೆ ನೀಡಿರುವ ಜಾಗವನ್ನು ಅರ್ಹರಿಗೆ 94 ಸಿ ಮತ್ತು 94 ಸಿಸಿ ಯಡಿಯಲ್ಲಿ ಆದ್ಯತೆಯ ಮೇಲೆ ಹಕ್ಕುಪತ್ರಗಳನ್ನು ನೀಡುವ ಕಾರ್ಯ ಆಗಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಬ್ರಹ್ಮಾವರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಕೃಷಿ ಮತ್ತು ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಕಾಮಗಾರಿಗಳಿಗಾಗಿ 310 ಕೋಟಿ ರೂ. ಮತ್ತು 195 ಕೊಟಿ ರೂ. ಗಳ ಯೋಜನೆಯನ್ನು ಕೈಗೊಳ್ಳಲಾಗಿದೆ. 80 ಕೋಟಿ ರೂ. ವೆಚ್ಚದಲ್ಲಿ ಬ್ರಹ್ಮಾವರ ಸೀತಾನದಿ ಚತುಷ್ಪಥ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ. ಕೇಂದ್ರ ಸರ್ಕಾರದ ನೆರವಿನಿಂದ 5 ಎಕ್ರೆ ಪ್ರದೇಶದಲ್ಲಿ 100 ಬೆಡ್ ಸಾಮರ್ಥ್ಯದ ಸುಸಜ್ಜಿತ ಇ.ಎಸ್.ಐ. ಆಸ್ಪತ್ರೆ ನಿರ್ಮಾಣ ಕಾಮಗಾರಿಯು ಟೆಂಡರ್ ಹಂತದಲ್ಲಿದೆ. ನೂತನ ತಾಲೂಕು ಕೋರ್ಟ್ ಹಾಗೂ ತಾಲೂಕು ಪಂಚಾಯತ್ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನಗಳು ನಡೆದಿವೆ ಎಂದರು.

    Click here

    Click here

    Click here

    Click Here

    Call us

    Call us

    ಪ್ರಸ್ತುತ ನೂತನ ತಾಲೂಕು ಆಡಳಿತ ಸೌಧದಲ್ಲಿ ಎಲ್ಲಾ ತಾಲೂಕು ಮಟ್ಟದ ಕಚೇರಿಗಳು ಒಂದೇ ಕಡೆ ಇರುವುದರಿಂದ ನಾಗರೀಕರಿಗೆ ಒಂದೇ ಕಡೆಯಲ್ಲಿ ಹಲವು ಸೌಲಭ್ಯಗಳು ಶೀಘ್ರದಲ್ಲಿ ದೊರೆಯಲಿದ್ದು, ಕಟ್ಟಡದಲ್ಲಿ ಪೀಠೋಪಕರಣ ಮತ್ತಿತರ ಸೌಲಭ್ಯಕ್ಕಾಗಿ ಹೆಚ್ಚುವರಿಯಗಿ 2.75 ಕೋಟಿ ರೂ. ಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸುವುದಾಗಿ ಕಂದಾಯ ಸಚಿವರು ಭರವಸೆ ನೀಡಿದ್ದಾರೆ ಎಂದರು. ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗವೇಣಿ ಪಂಡರೀನಾಥ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಮ್ ಹಾಕೆ, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಕರ್ನಾಟಕ ಗೃಹ ಮಂಡಳಿ ಇಂಜಿನಿಯರ್ ಸಹನಾ ಮತ್ತಿತರರು ಉಪಸ್ಥಿತರಿದ್ದರು.

    ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ ಸ್ವಾಗತಿಸಿದರು, ಕಂದಾಯ ನಿರೀಕ್ಷಕ ಲಕ್ಷ್ಮಿ ನಾರಾಯಣ ಭಟ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    18 + 7 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.