ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗುಜ್ಜಾಡಿ ಗ್ರಾಮದ ಬೆಣ್ಗೆರೆಯ ಶ್ರೀ ನಾಗ ದೇವಸ್ಥಾನದಲ್ಲಿ ೪೭ನೇ ನಾಗಮಂಡಲೋತ್ಸವ ಹಾಗೂ ಅಷ್ಟಬಂಧ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಗುರುವಾರ ನಡೆಯಿತು.
ಮಾ.೨೧ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ಸಾರ್ವತ್ರಿಕ ಪವಮಾನ ಅಭಿಷೇಕ, ಮಹಾಮಂಗಳಾರತಿ, ರಾತ್ರಿ ನವೋತ್ತರ ಶತದ್ರವ್ಯಪೂರಿತ ಬ್ರಹ್ಮಕಲಶ ಸ್ಥಾಪನೆ ನಡೆಯಿತು. ಮಾ.23 ಬೆಳಿಗ್ಗೆ ಸಂಹಿತಾ ಕಲಶ ಸ್ಥಾಪನೆ, ಪಾರಾಯಣ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾಮಂಗಳಾರತಿ, ನಾಗದರ್ಶನ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ ರಂಗಪೂಜೆ, ದರ್ಶನ, ವೈ. ವಾಸುದೇವ ವೈದ್ಯ ಮತ್ತು ಬಳಗದವರಿಂದ ನಾಗ ಮಂಡಲ ಸೇವೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರಗಿತು.