ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾ.ಹೆ- 66 ದಾಟುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸಾವನ್ನಪ್ಪಿದ ಘಟನೆ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಕೋಟೇಶ್ವರ ಕಡೆಯಿಂದ ತಲ್ಲೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್, ರಸ್ತೆ ದಾಟುತ್ತಿದ್ದ ಕುಮಾರ್ ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಕುಮಾರ್ ರನ್ನು ತಕ್ಷಣ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಸಾವನ್ನಪ್ಪಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.