ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಒಟ್ಟು ಮತದಾರರ ಸಂಖ್ಯೆ ಎಷ್ಟು ಗೊತ್ತೆ?

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಈಗಾಗಲೇ ಸಿದ್ಧಗೊಂಡಿದ್ದು, ಈ ಭಾರಿ ಹೊಸದಾಗಿ ಹೊಸದಾಗಿ 16,827 ಮತದಾರರ ಸೇರ್ಪಡೆಯಾಗಿದೆ. ಇದರಲ್ಲಿ 13,816 ಯುವ ಮತದಾರರಿದ್ದಾರೆ.

Call us

Click Here

ಉಡುಪಿ ಜಿಲ್ಲೆಯಲ್ಲಿ ಹಿಂದಿನ ಜನಗಣತಿಯಂತೆ ಒಟ್ಟು 1,177,361 ಜನಸಂಖ್ಯೆ ಇದ್ದು, ಈ ಪೈಕಿ ಒಟ್ಟು 10,16,245 ಮತದಾರರಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರ:
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,12,126 ಗಂಡಸರು, 1,17,421 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,29,550 ಮತದಾರರಿದ್ದಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರ:
ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 98,224 ಗಂಡಸರು, 1,06,298 ಮಹಿಳೆಯರು, 3 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 2,04,525 ಮತದಾರರಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರ:
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 1,02,192 ಗಂಡಸರು, 1,09,439 ಮಹಿಳೆಯರು ಸೇರಿದಂತೆ ಒಟ್ಟು 2,11,631 ಮತದಾರರಿದ್ದು, ಅಲ್ಪಸಂಖ್ಯಾತ ಮತದಾರರಿರುವುದಿಲ್ಲ.

Click here

Click here

Click here

Click Here

Call us

Call us

ಕಾಪು ವಿಧಾನಸಭಾ ಕ್ಷೇತ್ರ:
ಕಾಪು ವಿಧಾನಸಭಾ ಕ್ಷೇತ್ರದಲ್ಲಿ 88,114 ಗಂಡಸರು, 95,968 ಮಹಿಳೆಯರು, 6 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 1,84,088 ಮತದಾರರಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರ:
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 89,404 ಗಂಡಸರು, 97,047 ಮಹಿಳೆಯರು, ಸೇರಿದಂತೆ ಒಟ್ಟು 1,86,451 ಮತದಾರರಿದ್ದಾರೆ.

ಜಿಲ್ಲೆಯ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿಂದ 4,90,060 ಗಂಡಸರು, 5,26173 ಮಹಿಳೆಯರು, 12 ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 10,16,245 ಮತದಾರರಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅವಧಿಯಲ್ಲಿ ಹೊಸದಾಗಿ 16,827 ಮತದಾರರು ಸೇರ್ಪಡೆಯಾಗಿದ್ದು, 5,783 ಮತದಾರರನ್ನು ತೆಗೆದುಹಾಕಲಾಗಿದೆ. 13,321 ತಿದ್ದುಪಡಿ ಹಾಗೂ ವರ್ಗಾವಣೆಗೊಳಿಸಲಾಗಿದೆ. ಈ ಬಾರಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ 13,816 ಯುವ ಮತದಾರರು ಹಾಗೂ 11,331 ವಿಶೇಷ ಚೇತನರು ನೋಂದಣಿಯಾಗಿದೆ.

ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿಗಳನ್ನು ಸಾರ್ವಜನಿಕರು ಪಡೆಯುವ ಸಲುವಾಗಿ, ಉಡುಪಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಮಟ್ಟದ ಮತದಾರರ ಸಹಾಯವಾಣಿ ಕೇಂದ್ರವಿದ್ದು, ಟೋಲ್ ಫ್ರೀ ಸಂಖ್ಯೆಗೆ 1950 ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

Leave a Reply

Your email address will not be published. Required fields are marked *

5 × five =