Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೇ.10 ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ. ಚುನಾವಣಾ ನೀತಿ ಸಂಹಿತೆ ಜಾರಿ
    ಉಡುಪಿ ಜಿಲ್ಲೆ

    ಮೇ.10 ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ. ಚುನಾವಣಾ ನೀತಿ ಸಂಹಿತೆ ಜಾರಿ

    Updated:29/03/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು:
    ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.

    Click Here

    Call us

    Click Here

    ದಿದಿಲ್ಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಘೋಷಿಸಿದ್ದು, ಮೇ. 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ.13ರಂದು ಮತ ಎಣಿಕೆ ನಡೆಯಲಿದೆ.

    ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ (Election Commission) ಮುಖ್ಯಸ್ಥ ರಾಜೀವ್ ಕುಮಾರ್, ಎ.13 ಅಧಿಸೂಚನೆ ಹೊರಡಿಸಲಾಗುತ್ತದೆ. ಎ.20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಎ.21 ನಾಮಪತ್ರ ಪರಿಶೀಲಿಸಲು ಕೊನೆಯ ದಿನ,  ಎ.24 ನಾಮಪತ್ರ ಹಿಂತೆಗೆಯಲು ಕೊನೆಯ ದಿನವಾಗಿದ್ದು, ಮೇ.10ರಂದು ಚುನಾವಣೆ ನಡೆಯಲಿದೆ. ಮೇ.13ರಂದು ಮತಎಣಿಕೆ ನಡೆಯಲಿದೆ ಎಂದರು.

    ಕರ್ನಾಟಕದಲ್ಲಿ 5,21,73579 ಒಟ್ಟು ಮತದಾರರಿದ್ದು, 2, 62,42, 561 ಪುರುಷರು, 2,59,26,319 ಮಹಿಳೆಯರು, 4,699 ತೃತೀಯ ಲಿಂಗಿ ಹಾಗೂ 5.55 ಲಕ್ಷ ದಿವ್ಯಾಂಗ ಮತದಾರರಿದ್ದಾರೆ. 9.17.241 ಮಂದಿ ಮೊದಲ ಸಲ ಮತದಾನ ಮಾಡುತ್ತಿದ್ದಾರೆ ಎಂದು ಹೇಳಿದರು. ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತ ಚಲಾಯಿಸುವ ಅವಕಾಶ ನೀಡಲಾಗುತ್ತಿದೆ. ಸಾಕಷ್ಟು ಚಾಲೆಂಜ್ ಗಳಿವೆ, ಅವುಗಳನ್ನು ಸುಧಾರಿಸಿದೆ. ಬುಡಕಟ್ಟು ಸಮುದಾಯ ಮತದಾನಕ್ಕೂ ವ್ಯವಸ್ಥೆ ಮಾಡಲಾಗಿದೆ. ತೃತೀಯ ಲಿಂಗಿಗಳು ಮತದಾರರ ಸೇರ್ಪಡೆಗೆ ಹಿಂದೇಟು ಹಾಕುತ್ತಾರೆ. ಅವರಿಗೆ ನೋಂದಣಿ ಮಾಡಿಕೊಳ್ಳಲು ಮನವಿ ಮಾಡಲಾಗಿದೆ ಎಂದರು.

    58,282 ಒಟ್ಟು ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತಿದೆ. ಒಂದೊಂದು ಮತಗಟ್ಟೆಗೆ 883 ಮಂದಿ ಮತದಾರರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ನಗರ ಪ್ರದೇಶದಲ್ಲಿ 24,063, ಗ್ರಾಮೀಣ ಭಾಗದಲ್ಲಿ 34,219 ಹಾಗೂ 1320 ಮಹಿಳಾ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಇನ್ನು ಯುವಕರಿಗಾಗಿ 224 ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದರು.

    Click here

    Click here

    Click here

    Call us

    Call us

    ಅಭ್ಯರ್ಥಿಗಳ ಮಾಹಿತಿ, ಪ್ರಮಾಣ ಪತ್ರ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಈ ಮೂಲಕ ಜನರು ತಮ್ಮ ಅಭ್ಯರ್ಥಿಯ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. ಅಫಿಡೆವಿಟ್ APPನಲ್ಲಿ ಅಪ್ಲೋಡ್ ಮಾಡಲಾಗುವುದು. ಆ್ಯಪ್ ಸಹಾಯದಿಂದ ಚುನಾವಣಾ ಅಕ್ರಮಗಳನ್ನು ಜನರು ದೂರು ನೀಡಬಹುದು. ಈ ಹಿಂದೆ ನಡೆದ ಐದು ರಾಜ್ಯಗಳ ಚುನಾವಣೆಯಲ್ಲಿ 1028 ಕೋಟಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಕರ್ನಾಟಕದಲ್ಲಿ ಅಕ್ರಮ ತಡೆಯಲು 2400 ತಂಡಗಳನ್ನು ರಚಿಸಿದೆ. ವಿಮಾನ ನಿಲ್ದಾಣಗಳಲ್ಲಿ ಪರಿಶೀಲನೆಗಳನ್ನು ನಡೆಸಲಾಗುತ್ತದೆ ಎಂದರು.

    https://youtube.com/live/6FHUpdtjNt4

    ಪ್ರಸ್ತುತ ವಿಧಾನಸಭೆಯ ಅವಧಿಯು ಮೇ 24, 2023 ರಂದು ಮುಕ್ತಾಯಗೊಳ್ಳುತ್ತಿದ್ದು, ಅದರೊಳಗೆ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಾಗಿದೆ.

    ನೀತಿ ಸಂಹಿತೆ ಜಾರಿಯಾದರೆ ಏನಾಗುತ್ತೆ?
    ಚುನಾವಣೆ ಘೋಷಣೆಯಾದ ಕ್ಷಣದಿಂದಲೇ ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಈ ಹಿನ್ನೆಲೆ ಸಿಎಂ ಸೇರಿ ಸಚಿವರು ಸರ್ಕಾರಿ ಸೌಲಭ್ಯವನ್ನು ಬಳಸುವಂತಿಲ್ಲ ಹಾಗೂ ಸರ್ಕಾರ ಯಾವುದೇ ಹೊಸ ಯೋಜನೆ ಘೋಷಣೆ ಮಾಡುವಂತಿಲ್ಲ. ಈಗಾಗಲೇ ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ರಾಜ್ಯ ಚುನಾವಣಾ ಆಯೋಗದ ಜಂಟಿ ಆಯುಕ್ತರು ಪತ್ರ ಬರೆದಿದ್ದಾರೆ. ಈ ಹಿನ್ನೆಲೆ ಕಾರ್ಯಪ್ರವೃತ್ತರಾಗಿರುವ ಜಿಲ್ಲಾ ಚುನಾವಣಾಧಿಕಾರಿಗಳು ರಾಜಕೀಯ ನಾಯಕರ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ಗಳನ್ನು ತೆರವುಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಗಡಿಯಲ್ಲಿ ಚೆಕ್ ಪೋಸ್ಟ್ ತಯಾರಾಗಿದ್ದು, ಚುನಾವಣಾ ಅಕ್ರಮಗಳ ಮೇಲೆ ಕಣ್ಣಿಡಲಾಗಿದೆ.

    https://youtube.com/live/6FHUpdtjNt4
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.