Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಪಡಿಸಲು ಅನುಮತಿ ಕಡ್ಡಾಯ: ಡಿಸಿ ಕೂರ್ಮಾರಾವ್ ಎಂ.
    ಉಡುಪಿ ಜಿಲ್ಲೆ

    ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಪಡಿಸಲು ಅನುಮತಿ ಕಡ್ಡಾಯ: ಡಿಸಿ ಕೂರ್ಮಾರಾವ್ ಎಂ.

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಏ.2:
    ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಎಂಸಿಎಂಸಿ ಸಮಿತಿಯ ಅನುಮತಿ ಕಡ್ಡಾಯವಾಗಿದ್ದು, ಸಮಿತಿಯ ಅನುಮತಿ ಪಡೆಯದೇ ಜಾಹೀರಾತು ಪ್ರಕಟಿಸಿದಲ್ಲಿ ಸಂಬAದಪಟ್ಟವರ ವಿರುದ್ದ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಎಚ್ಚರಿಕೆ ನೀಡಿದ್ದಾರೆ.

    Click Here

    Call us

    Click Here

    ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಎಂಸಿಎಂಸಿ ಕಚೇರಿಗೆ ಭೇಟಿ ನೀಡಿ ಮಾತನಾಡುತ್ತಾ, ಜಾಹೀರಾತುಗಳ ಪ್ರಕಟಣೆ ಬಗ್ಗೆ ಅನುಮತಿ ಪಡೆಯುವ ಕುರಿತಂತೆ, ಜಿಲ್ಲಾ ಎಂಸಿಎAಸಿ ಸಮಿತಿಗೆ ಜಾಹೀರಾತು ಪ್ರಕಟಣೆ ಕೋರಿ ಲಿಖಿತ ಅರ್ಜಿಯನ್ನು ಸಲ್ಲಿಸಿ, ಅಗತ್ಯ ಅನುಮತಿ ಪಡೆದ ನಂತರವೇ ಜಾಹೀರಾತು ಪ್ರಕಟಿಸಬೇಕು ಎಂದು ಅವರು ಹೇಳಿದರು.

    ಚುನಾವಣಾ ಪ್ರಚಾರಕ್ಕಾಗಿ ಮುದ್ರಣಗೊಂಡ ಕರಪತ್ರಗಳ ಮೇಲೆ ಅದನ್ನು ಮುದ್ರಣ ಮಾಡಿದ ಮುದ್ರಕರ ಹೆಸರು, ಹಾಗೂ ವಿಳಾಸ, ಪ್ರತಿಗಳ ಸಂಖ್ಯೆ ಸೇರಿದಂತೆ ಮತ್ತಿತರ ವಿಷಯಗಳನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂದರು.
    ಮುದ್ರಣ ಕುರಿತ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ 3 ದಿನಗಳ ಒಳಗಾಗಿ ಹಾಗೂ ಸಾಮಗ್ರಿಯ ಪ್ರತಿಯನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿ ಕಚೇರಿಗೆ ಒದಗಿಸಬೇಕು. ಇದರ ಉಲ್ಲಂಘನೆಯು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಲಿದೆ ಎಂದರು.

    ಜಿಲ್ಲಾ ಎಂಸಿಎಂಸಿ ಕಚೇರಿಯನ್ನು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ತೆರೆಯಲಾಗಿದ್ದು, ಜಾಹೀರಾತು ಪ್ರಕಟಣೆ ಕುರಿತಂತೆ ಅನುಮತಿ ಪಡೆಯಲು ಈ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದರು.

    ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಜಿಲ್ಲಾ ಎಂಸಿಎAಸಿ ಸಮಿತಿಯ ನೋಡೆಲ್ ಅಧಿಕಾರಿ ಮತ್ತು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಮೇಲ್ವಿಚಾರಕರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    seventeen − five =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.