ಸ್ವೀಪ್ ಸಮಿತಿ ವತಿಯಿಂದ ಪ್ರೊಪೈಲ್ ಇಮೇಜ್ ಬಿಡುಗಡೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿದಿಸಿದಂತೆ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೆ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಯುವಜನತೆ ಸೇರಿದಂತೆ ಬಹುತೇಕ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿರುವ ಹಿನ್ನಲೆಯಲ್ಲಿ ಇವರನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ರೊಪೈಲ್ ಇಮೇಜ್‌ಗಳನ್ನು ಸಿದ್ದಪಡಿಸಲಾಗಿದೆ.

Call us

Click Here

ಮತದಾನದ ಕುರಿತು ಜಾಗೃತಿ ಮೂಡಿಸಲು ಮತದಾನದ ದಿನವಾದ ಮೇ 10 ನ್ನು ಸಾರ್ವಜನಿಕರಿಗೆ ಸದಾ ನೆನಪು ಮಾಡುವಂತೆ, ಪ್ರೊಪೈಲ್ ಇಮೇಜ್ ಗಳನ್ನು ಸಿದ್ದಪಡಿಸಿದ್ದು, ಇವುಗಳನ್ನು ಮೊಬೈಲ್ ನ ಡಿಪಿಯಾಗಿ ಹಾಗೂ ಫೇಸ್ ಬುಕ್ ನಲ್ಲಿ ಸ್ಟಿಕರ್ ಆಗಿ ಬಳಸಲು ಅನುಕೂಲವಾಗುವಂತೆ ರಚಿಸಲಾಗಿದೆ.

ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಾದ ಸೈಂಟ್ ಮೇರಿಸ್ ದ್ವೀಪ, ಸಮುದ್ರ ತೀರ, ಕಾಪು ದೀಪ ಸ್ಥಂಭ, ಮರವಂತೆ , ಪಶ್ಚಿಮ ಘಟ್ಟಗಳನ್ನು ಹಿನ್ನಲೆಯಾಗಿ ಇಟ್ಟುಕೊಂಡು 8 ಕ್ಕೂ ಅಧಿಕ ಪ್ರೊಪೈಲ್ ಇಮೇಜ್ ಗಳನ್ನು ಅತ್ಯಂತ ಆಕರ್ಷಕವಾಗಿ ಸಿದ್ದಪಡಿಸಲಾಗಿದ್ದು, ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಇವುಗಳನ್ನು ಬಿಡುಗಡೆಗೊಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಲ್ಲಾ ಚುನಾವಣಾ ಶಾಖೆಯ ತಹಸೀಲ್ದಾರ್ ಪರಶುರಾಮ್ ಶ್ರೀ ಕಲಾಲ್ ಮತ್ತಿತರರು ಉಪಸ್ಥಿತರಿದ್ದರು.

ಈ ಪ್ರೊಪೈಲ್ ಇಮೇಜ್‌ಗಳನ್ನು ಕಮಲ್ ಅಹಮದ್ ರಚಿಸಿದ್ದು, ಗಿರೀಶ್ ಹಾಗೂ ಚಂದ್ರಶೇಖರ್ ವಿನ್ಯಾಸಗೊಳಿಸಿದ್ದಾರೆ.

Click here

Click here

Click here

Click Here

Call us

Call us

Leave a Reply