ಅಕ್ರಮ ಮದ್ಯ ಮಾರಾಟ ವಿರುದ್ದ ಕಠಿಣ ಕ್ರಮ: ಜಿಲ್ಲಾಧಿಕಾರಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಲ್ಲಿ ಸುಗಮ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಎಲ್ಲಾ ಸಿದ್ದತೆಗಳ್ನು ನಡೆಸಲಾಗುತ್ತಿದ್ದು, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಸನ್ನದುದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಚ್ಚರಿಕೆ ನೀಡಿದರು.

Call us

Click Here

ಅವರು ಇಂದು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊದಿಗೆ ಹಾಗೂ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಯಲ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲಾ ಮದ್ಯ ಮಾರಾಟಗಾರರು ಪ್ರತಿ ದಿನದ ದಾಸ್ತಾನು ಮತ್ತು ಮಾರಾಟದ ವಿವರಗಳ ದಾಖಲೆಗಳನ್ನು ನಿರ್ವಹಿಸುವುದರ ಜೊತೆಗೆ ಅಬಕಾರಿ ಇಲಾಖೆಗೆ ನಿಗಧಿತ ಮಾಹಿತಿಯನ್ನು ಒದಗಿಸಬೇಕು, ಇದರಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಲ್ಲಿ ಮತ್ತು ನಿಗಧಿತ ಸ್ಥಳವನ್ನು ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಿದ್ದಲ್ಲಿ ಅಂತಹ ಸನ್ನದುದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಎಲ್ಲಾ ಉದ್ದಿಮೆದಾರರು ತಮ್ಮ ಗೋಡೌನ್ ಗಳನ್ನು ಇತರರಿಗೆ ಅನ್ಯ ಉದ್ದೇಶಕ್ಕೆ ನೀಡದಂತೆ ಮತ್ತು ಗೋಡೌನ್ ಗಳಲ್ಲಿ ಯಾವುದೇ ಅಕ್ರಮ ದಾಸ್ತಾನುಗಳು ಶೇಖರವಾಗದಂತೆ ಎಚ್ಚರವಹಿಸಬೇಕು, ತಮ್ಮ ದೈನಂದಿನ ಸಗಟು ವ್ಯವಹಾರದ ಬಗ್ಗೆ ಅಗತ್ಯ ದಾಖಲೆಗಳನ್ನು ಸಮರ್ಪಕವಾಗಿ ಇಟ್ಟುಕೊಳ್ಳುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಪರಿಶೀಲನೆಗೆ ನೀಡುವಂತೆ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟಿçಯಲ್ ನ ಪದಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಚುನಾವಣಾ ವೆಚ್ಚ ಮೇಲ್ವಿಚಾರಣೆ ಸಮಿತಿಯ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪ್ರಸನ್ನ ಭಕ್ತ ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

ಮಾಸ್ಟರ್ ಟ್ರೇನರ್ ಡಾ.ಅಶೋಕ್ ಕಾಮತ್ , ಚುನಾವಣಾ ಆಯೋಗವು ಸೂಚಿಸಿರುವ ಮಾನದಂಡಗಳ ಕುರಿತಂತೆ ಮಾಹಿತಿ ನೀಡಿದರು.

ಸಭೆಯಲ್ಲಿ ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ರೂಪಾ, ಕೈಗಾರಿಕ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ನಾಯಕ್, ಜಿಲ್ಲೆಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟಿçಯಲ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply