ಕೂಸಳ್ಳಿ ಫಾಲ್ಸ್‌ನಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನಾಪತ್ತೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಕೂಸಳ್ಳಿ ಫಾಲ್ಸ್‌ಗೆ ಸ್ನೇಹಿತರೊಂದಿಗೆ ತೆರಳಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಈಜುವ ಸಂದರ್ಭ ಮುಳುಗಿ ನಾಪತ್ತೆಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.

Call us

Click Here

ನಾಪತ್ತೆಯಾದ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ (20) ಎಂದು ತಿಳಿದುಬಂದಿದೆ. ಈತ ಮಂಗಳೂರಿನ ಶ್ರೀದೇವಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ಜೊತೆಗೆ ಏವಿಯೇಷನ್‌ ಕೋರ್ಸ್ ಕಲಿಯುತ್ತಿದ್ದ.

ಶುಕ್ರವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತರಾದ ಕಿರ್ತನ್ ದೇವಾಡಿಗ, ಅಕ್ಷಯ್ ಆಚಾರಿ, ಆಲ್ವಿನ್, ಧರಣ್, ರೆಯಾನ್ ಜೊತೆಗೆ ಗುರುವಾರ ಬೈಂದೂರಿಗೆ ಬಂದಿದ್ದು, ಅಕ್ಷಯ್ ಆಚಾರಿ ಮನೆಯಲ್ಲಿ ಎಲ್ಲರೂ ಉಳಿದುಕೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಕೀರ್ತನ್ ದೇವಾಡಿಗನ ಮನೆಯಲ್ಲಿ ಊಟ ಮುಗಿಸಿ 3.30ರ ಸುಮಾರಿಗೆ ಬೈಕಿನಲ್ಲಿ ಕೊಸಳ್ಳಿ ಫಾಲ್ಸ್‌ಗೆ ಹೋಗಿದ್ದರು. ಚಿರಾಂತ್ ಶೆಟ್ಟಿಗೆ ಮಾತ್ರ ಈಜು ಬರುತ್ತಿದ್ದರಿಂದ ಆತ ಈಜಲು ನೀರಿಗಿಳಿದರೇ, ಉಳಿದವರು ದಡದಲ್ಲಿಯೇ ಕುಳಿತಿದ್ದರು.

ನೀರಿಗಿಳಿದ ಚಿರಾಂತ್ ಕೆಳ ಹೊತ್ತಿನಲ್ಲೇ ಮುಳುಗಿ ನಾಪತ್ತೆಯಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ, ಸ್ಥಳೀಯರು ಹುಡುಕಾಟ ನಡೆಸಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply