ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದರೆ ತಕ್ಷಣ ಮಾಹಿತಿ ನೀಡಿ – ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇ.ಎಲ್.ಸಿ ಮತ್ತು ಎನ್.ಎಸ್.ಎಸ್ ಘಟಕಗಳು, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಉಡುಪಿ ಜಿಲ್ಲೆ ಮತ್ತು ತಾಲ್ಲೂಕು ಸ್ವೀಪ್ ಸಮಿತಿ ಬೈಂದೂರು ಇವರ ಸಹಯೋಗದೊಂದಿಗೆ ‘ಮತದಾರರ ಜಾಗೃತಿ ಅಭಿಯಾನ’ದ ಭಾಗವಾಗಿ ಮತದಾರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Call us

Click Here

ಕಾರ್ಯಕ್ರಮದಲ್ಲಿ 118 ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳಾದ ಜಗದೀಶ್ ಗಂಗಣ್ಣನವರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ “ಮಾದರಿ ನೀತಿ ಸಂಹಿತೆ ಕುರಿತು ಹಾಗೂ ಮತಯಂತ್ರಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು. ಎಲ್ಲೇ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ತಾಲ್ಲೂಕು ಚುನಾವಣಾ ಸಹಾಯವಾಣಿಗೆ ಮಾಹಿತಿ ನೀಡುವಂತೆ ತಿಳಿಸಿದರು”.

ಬೈಂದೂರು ತಹಶೀಲ್ದಾರರಾದ ಪ್ರಭುಸ್ವಾಮಿ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಮತದಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು”. ತಾ.ಪಂ ಕಾರ್ಯನಿರ್ವಹಣಾ ಅಧಿಕಾರಿಗಳಾದ ಭಾರತಿಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ತಾಲ್ಲೂಕು ಕಛೇರಿ ಬೈಂದೂರು ಇದರ ಉಪ ತಹಶೀಲ್ದಾರರಾದ ಭೀಮಪ್ಪ ಉಪಸ್ಥಿತರಿದ್ದರು.

ಇ.ಎಲ್.ಸಿ ಸಂಚಾಲಕರಾದ ಡಾ. ಶಿವಕುಮಾರ ಪಿ.ವಿ. ಸ್ವಾಗತಿಸಿದರು ನವೀನ್ ಹೆಚ್.ಜೆ ವಂದಿಸಿದರು.

Click here

Click here

Click here

Click Here

Call us

Call us

Leave a Reply