ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ವರ್ಧಿಸಲು ಬೈಂದೂರು ವಿಧಾನಸಭಾ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಪ್ರಸಾದ್ ಶನಿವಾರ ನಾಮಪತ್ರ ಸಲ್ಲಿಸಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್ ಅಭ್ಯರ್ಥಿಯ ನಾಮಪತ್ರ ಸ್ವೀಕರಿಸಿದರು. ಬೈಂದೂರು ತಾಲೂಕಿನ ಆಲೂರು ಗ್ರಾಮದ 28 ವರ್ಷದ ಯುವಕ ಪ್ರಸಾದ್ ಏಕಾಂಗಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.