ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಕಾರ್ಯಕರ್ತರ ಪಡೆದ ಸಿದ್ಧವಾಗಿದ್ದು, ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿಯಾಗಿದೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು.
ಭಾನುವಾರ ಕುಂದಾಪ್ರ ಡಾಟ್ ಕಾಂನೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳುಗಳಿಂದ ಕಾಂಗ್ರೆಸ್ ಬಿರುಸಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದೆ. ಬೂತ್ ಮಟ್ಟದಲ್ಲಿ ಮತದಾರರನ್ನು ತಲುಪಿದ್ದು, ನಾಮಪತ್ರ ಸಲ್ಲಿಸಿದ ಬಳಿಕ ಮತ್ತೆ ಪ್ರಚಾರ ನಡೆಸಲಿದ್ದೇವೆ ಎಂದರು.
ಎಪ್ರಿಲ್ 18ರ ಮಧ್ಯಾಹ್ನ ನಾಮಪತ್ರ ಸಲ್ಲಿಸಲಾಗುತ್ತಿದ್ದು, ಇದಕ್ಕೂ ಪೂರ್ವಭಾವಿಯಾಗಿ ಬೆಳಿಗ್ಗೆ ತ್ರಾಸಿಯಲ್ಲಿ ಸಭೆ ಮೆರವಣಿಗೆ ನಡೆಯಲಿದೆ ಎಂದರು.