‘ವಿ-ಗ್ರೋ’ ಬ್ಯುಸಿನೆಸ್ ಡೇ – ವ್ಯವಹಾರ ಯೋಜನೆ ಪ್ರಸ್ತುತಿ ಕಾರ್ಯಕ್ರಮ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಕೌಶಲ್ಯ ಬೆಳೆಸುವ ಉದ್ಧೇಶದಿಂದ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗವು ಆಯೋಜಿಸಿರುವ ’ವಿ-ಗ್ರೋ’ ಬ್ಯುಸಿನೆಸ್ ಡೇ ಇದರ ಮೊದಲನೇ ಹಂತದ ವ್ಯವಹಾರ ಯೋಜನೆ ಪ್ರಸ್ತುತಿ ಕಾರ್ಯಕ್ರಮ ನೆರವೇರಿತು.

Call us

Click Here

ವಿದ್ಯಾರ್ಥಿಗಳು ತಮ್ಮಲ್ಲಿರುವ ವ್ಯವಹಾರ ಜ್ಞಾನವನ್ನು, ಹೊಸ ಹೊಸ ಕ್ರಿಯಾ ಯೋಜನೆ ಮತ್ತು ಯೋಚನೆಯನ್ನು ಪ್ರಸ್ತುತ ಪಡಿಸುವ ಮೂಲಕ, ಕೌಶಲ್ಯ ಅಭಿವೃದ್ಧಿಗೆ ಇದೊಂದು ಸೂಕ್ತ ವೇದಿಕೆಯಾಗಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಪ್ರಾಸ್ತಾವಿಸಿದರು. ತೀರ್ಪುಗಾರರಾಗಿ ಶಂಕರನಾರಾಯಣ ಮದರ್ ತೆರೆಸಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಗೀತಾ, ಭಟ್ಕಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಮೋಹಿನಿ ಅತ್ತಿಮನೆ ಹಾಗೂ ಕುಂದಾಪುರ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಮಂಜುನಾಥ್ ಎಮ್. ಉಪಸ್ಥಿತರಿದ್ದರು.

ವಾಣಿಜ್ಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ರಾಜೇಶ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿ, ಪ್ರೀತಿ ಹೆಗ್ಡೆ ನಿರೂಪಿಸಿದರು. ತೃತೀಯ ಬಿ.ಕಾಂ. ವಿದ್ಯಾರ್ಥಿನಿ ದೀಕ್ಷಾ ಪ್ರಾರ್ಥಿಸಿದರು.

Leave a Reply