Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮುಕ್ತ, ಪಾರದರ್ಶಕ ಚುನಾವಣೆ ನಡೆಸಿ: ಚುನಾವಣಾ ವೀಕ್ಷಕ ತುಕಾರಾಂ ಹರಿಬಾಹು ಮುಂಡೆ
    ಉಡುಪಿ ಜಿಲ್ಲೆ

    ಮುಕ್ತ, ಪಾರದರ್ಶಕ ಚುನಾವಣೆ ನಡೆಸಿ: ಚುನಾವಣಾ ವೀಕ್ಷಕ ತುಕಾರಾಂ ಹರಿಬಾಹು ಮುಂಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಏ.21:
    ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬAದಿಸಿದAತೆ, ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗ ನೀಡುವ ಎಲ್ಲಾ ನಿರ್ದೇಶನಗಳನ್ನು ಪಾಲಿಸುವುದರ ಮೂಲಕ ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕ ಚುನಾವಣೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ತುಕಾರಾಂ ಹರಿಬಾಹು ಮುಂಡೆ ಹೇಳಿದರು.

    Click Here

    Call us

    Click Here

    ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯಲ್ಲಿ ನಡೆದಿರುವ ಚುನಾವಣಾ ಪೂರ್ವ ಸಿದ್ದತೆಗಳನ್ನು ಬಗ್ಗೆ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಚುನಾವಣಾ ಪ್ರಕ್ರಿಯೆಯ ಯಾವುದೇ ಹಂತದಲ್ಲಿ ಲೋಪಗಳು ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು ಮತಗಟ್ಟೆಗಳಲ್ಲಿ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಮತದಾರರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ತಿಳಿಸಿದರು.

    ಚುನಾವಣಾ ಆಯೋಗವು ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ಮನೆಯಿಂದಲೇ ಮತದಾನ ಮಾಡಲು ನೀಡಿರುವ ಸೌಲಭ್ಯವನ್ನು ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವಂತೆ ಹೇಳಿದರು.

    ಮತದಾನ ಕರ್ತವ್ಯಕ್ಕೆ ನಿಯೋಜಿಸುವ ಸಿಬ್ಬಂದಿಗಳಿಗೆ ತರಬೇತಿ ನೀಡುವ ಸಮಯದಲ್ಲಿ , ಮತದಾನ ದಿನದಂದು ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡದ ರೀತಿಯಲ್ಲಿ ವಿವರವಾಗಿ ಮಾಹಿತಿ ನೀಡುವಂತೆ ಹಾಗೂ ಮತಯಂತ್ರಗಳ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ತರಬೇತಿ ನೀಡುವಂತೆ ಹಾಗೂ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳು ಅಂಚೆ ಮತದಾನದ ಮೂಲಕ ತಮ್ಮ ಹಕ್ಕು ಚಲಾಯಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ತಿಳಿಸಿದರು.

    Click here

    Click here

    Click here

    Click Here

    Call us

    Call us

    ಕಾರ್ಕಳ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಆಂದ್ರ ವಂಶಿ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅತೀ ಹೆಚ್ಚು ಮತದಾನವಾಗುವಂತೆ, ಸ್ವೀಪ್ ವತಿಯಿಂದ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದ ಅವರು ವಿವಿಧ ರಾಜಕೀಯ ಪಕ್ಷದ ಏಜೆಂಟ್‌ಗಳೊAದಿಗೆ ಸಭೆಯನ್ನು ಮುಂದಿನ ದಿನಗಳಲ್ಲಿ ನಡೆಸಿ ಅವರುಗಳ ಅಹವಾಲುಗಳನ್ನು ಪರಿಶೀಲಿಸಲಾಗುವುದು ಎಂದರು.

    ವೆಚ್ಚ ವೀಕ್ಷಕ ಅಂಕಿತ್ ಸೋಮನಿ ಮಾತನಾಡಿ, ಜಿಲ್ಲೆಯ ಬ್ಯಾಂಕ್ ವ್ಯವಹಾರಗಳ ಮೇಲೆ ಹೆಚ್ಚಿನ ನಿಗಾ ಇಡುವಂತೆ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

    ಪೊಲೀಸ್ ವೀಕ್ಷಕಿ ಬಿನಿತಾ ಠಾಕೂರ್, ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆಯಿಂದ ನಿಯೋಜಿಸಿರುವ ಸಿಬ್ಬಂದಿಗಳ ಮಾಹಿತಿ ಮತ್ತು ಸೂಕ್ಷö್ಮ ಮತ್ತು ಅತೀ ಸೂಕ್ಷö್ಮ ಮತಗಟ್ಟೆಗಳಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

    ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲೆಯಲ್ಲಿ ಇದುವರೆಗೆ ಕೈಗೊಂಡಿರುವ ಚುನಾವಣಾ ಪೂರ್ವ ಸಿದ್ದತೆಗಳ ಬಗ್ಗೆ ವಿವರಿಸಿದರು.

    ಸಭೆಯಲ್ಲಿ ಕಾರ್ಕಳ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಆಂಧ್ರ ವಂಶಿ, ವೆಚ್ಚ ವೀಕ್ಷಕ ಗೋರ್ಸೆ ಪ್ರಸಾದ್ ದತ್ತಾತ್ರೇಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಹಾಗೂ ಚುನಾವಣಾ ಕಾರ್ಯಕ್ಕೆ ನಿಯೋಜಿಸಿರುವ ವಿವಿಧ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    15 − one =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.