ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ.
ಕಾಲೇಜಿನ ವಿಜ್ಞಾನ ವಿಭಾಗದ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದಿರುತ್ತಾಳೆ.
ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲಿಯೇ ವಿವಿಧ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ಪೂರ್ಣಗೊಳಿಸಿ, ದ್ವೀತಿಯ ಪಿ.ಯು.ಸಿ.ಗೆ ನೇರವಾಗಿ ನಮ್ಮ ಕಾಲೇಜಿನಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.