ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 6ನೇ ರ್ಯಾಂಕ್ ಪಡೆದಿರುತ್ತಾಳೆ.
ಕಾಲೇಜಿನ ವಿಧ್ಯಾರ್ಥಿಗಳು 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.