ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ರ್ಯಾಂಕ್ ದೊರೆತಿದೆ.
ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಾಹುಲ್ ಪೂಜಾರಿ 588 ಅಂಕ ಗಳಿಸಿ ರಾಜ್ಯಕ್ಕೆ 9ನೇ ಸ್ಥಾನ ಪಡೆದಿದ್ದರೆ, ವೈಷ್ಣವಿ 587 ಅಂಕ ಗಳಿಸಿ ರಾಜ್ಯಕ್ಕೆ 10ನೇ ಸ್ಥಾನ ಪಡೆದಿದ್ದಾಳೆ.
ಕಾಲೇಜು ಈ ಭಾರಿ ಶೆ.93.23 ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂಧಿಸಿದ್ದಾರೆ.