ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮುಸ್ಲಿಂ ಸಮುದಾಯದ ಈದುಲ್ ಫಿತ್ರ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕುಂದಾಪುರ ಹಾಗೂ ಬೈಂದೂರು ತಾಲೂಕಿನ ನಾನಾ ಮಸಿದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು.

ಮುಸ್ಲಿಂ ಸಮುದಾಯವರು ಬೆಳಿಗ್ಗೆ ಅರ್ಹರಿಗೆ ಫಿತ್ರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ನಮಾಜ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.