ಮತ ಮಾರಿಕೊಳ್ಳಬೇಡಿ: ನ್ಯಾ.ಶಾಂತವೀರ ಶಿವಪ್ಪ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಮೇ 10 ರಂದು ನಡೆಯುವ ವಿಧಾನಸಭಾ ಸಾರ್ವತ್ರಿಕಚುನಾವಣೆಯಲ್ಲಿ ಮತದಾರರುಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ, ತಮ್ಮ ಮತವನ್ನು ಮಾರಿಕೊಳ್ಳದೇ, ಉತ್ತಮಅಭ್ಯರ್ಥಿಗೆ ಮತಚಲಾಯಿಸುವಂತೆಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು.

Call us

Click Here

ಅವರು ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮದರ್ಜೆಕಾಲೇಜು ಮತ್ತು ಸ್ನಾತಕೋತ್ತರಅಧ್ಯಯನಕೇಂದ್ರದಲ್ಲಿ, ಜಿಲ್ಲಾ ಸ್ವೀಪ್ ಸಮಿತಿವತಿಯಿಂದ ನಡೆದ ಮತದಾನಜಾಗೃತಿಕಾರ್ಯಕ್ರಮದಲ್ಲಿ, ಮತದಾನಜಾಗೃತಿ ಸಾರುವಟ್ಯಾಬ್ಲೋ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಚುನಾವಣೆಯಲ್ಲಿ ಬಹುತೇಕಯುವಜನತೆ ಮೊದಲ ಬಾರಿಗೆ ಮತ ಚಲಾಯಿಸುವ ಸಂಭ್ರಮದಲ್ಲಿದ್ದು, ಯಾವುದೇ ಆಮಿಷಗಳಿಗೆ ಬಲಿಯಾಗದೇ, ತಮ್ಮ ಮುಂದಿನ ಭವಿಷ್ಯಕ್ಕೆಉತ್ತಮಯೋಜನೆರೂಪಿಸುವ, ಉದ್ಯೋಗ ಸೃಷ್ಠಿಸುವ ಆಲೋಚನೆಯಿರುವ, ಪ್ರಾಮಾಣಿಕ ಮತ್ತು ನೈತಿಕತೆಯಿರುವಅಭ್ಯರ್ಥಿಗೆ ಮತ ನೀಡುವುದರ ಮೂಲಕ ತಮ್ಮ ಹಕ್ಕು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ವಿದ್ಯಾರ್ಥಿನಿಯರಿಗೆ ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದ ಜಿಲ್ಲಾಧಿಕಾರಿಕೂರ್ಮಾರಾವ್ ಎಂ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಯುವಜನತೆ ಮತದಾರರ ಪಟ್ಟಿಗೆತಮ್ಮ ಹೆಸರು ನೊಂದಣಿ ಮಾಡಿದ್ದು, ಇದರಿಂದಜಿಲ್ಲೆಗೆಚುನಾವಣಾಆಯೋಗದಿAದರಾಜ್ಯಮಟ್ಟದಲ್ಲಿ ಪ್ರಶಸ್ತಿ ಸಹ ಬಂದಿದೆ. ಮತದಾನ ದಿನದಂದುಜಿಲ್ಲೆಯಎಲ್ಲಾಯುವಜನತೆತಪ್ಪದೇತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡಬೇಕುಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾಎಸ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಉಡುಪಿ ನಗರಸಭೆಯ ಪೌರಾಯುಕ್ತರಮೇಶ್ ನಾಯಕ್ ಹಾಗೂ ಕಾಲೇಜಿನಉಪನ್ಯಾಸಕರು ಹಾಗೂ ಮತ್ತಿತರರು ಭಾಗವಹಿಸಿದ್ದರು.

Click here

Click here

Click here

Click Here

Call us

Call us

ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.

ಕಾಲೇಜಿನ 2000 ಕ್ಕೂ ಅಧಿಕ ವಿದ್ಯಾರ್ಥಿನಿಯರು ಮತದಾನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಎಲೆಕ್ಟಾçನಿಕ್ ಮತಯಂತ್ರ ಹಾಗೂ ವಿವಿ ಪ್ಯಾಟ್ನ ಸ್ತಬ್ಧಚಿತ್ರವನ್ನು ಒಳಗೊಂಡಿರುವ ಮತದಾನಜಾಗೃತಿ ಮೂಡಿಸುವ ವಾಹನವು ಜಿಲ್ಲೆಯಾದ್ಯಂತ ಸಂಚರಿಸಿ, ಸಾರ್ವಜನಿಕರಿಗೆ ಮತದಾನದ ಮಹತ್ವಕುರಿತುಜಾಗೃತಿ ಮೂಡಿಸಲಿದೆ.

Leave a Reply