ನಾಡ ಗ್ರಾಮದಲ್ಲಿ ಬಿಜೆಪಿ ಸೇರ್ಪಡೆಗೊಂಡ ಯುವಪಡೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭೆ ಕ್ಷೇತ್ರದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಡಗುಡ್ಡೆಯಂಗಡಿ,ಬಡಾಕೆರೆ, ಸೇನಾಪುರ ಮತ್ತು ತಾರಿಬೇರು ಭಾಗದ ಕಾಂಗ್ರೆಸ್ ಮತ್ತು ಇತರೆ ಪಕ್ಷದ ಕಾರ್ಯಕರ್ತರು ಹಾಗೂ ಹತ್ತಾರು ಯುವಕರು ಬಿಜೆಪಿ ಪಕ್ಷವನ್ನು ಶುಕ್ರವಾರ ಸೇರ್ಪಡೆಯಾಗಿದ್ದಾರೆ.

Call us

Click Here

ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಈ ಸಂದರ್ಭ ಮಾತನಾಡಿ, ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಪಕ್ಷದ ಶಾಸಕರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೆಚ್ಚಿಕೊಂಡು ಯುವಕರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ,ಯುವ ಕಾರ್ಯಕರ್ತರ ಸೇರ್ಪಡೆಯಿಂದ ಈ ಭಾಗದಲ್ಲಿ ಬಿಜೆಪಿಗೆ ಇನ್ನಷ್ಟು ಶಕ್ತಿ ತುಂಬಿದ್ದಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಹೇಂದ್ರ ಪೂಜಾರಿ,ಸುರೇಶ್ ಶೆಟ್ಟಿ,ಕಿಶೋರ್ ಶೆಟ್ಟಿ,ಶೇಖರ್ ಖಾರ್ವಿ,ಅಶೋಕ ಶೆಟ್ಟಿ ಸಂಸಾಡಿ, ಶಂಕರ್ ಶೆಟ್ಟಿ ಬೆಳ್ಳಾಡಿ ,ಶರತ್ ಶೆಟ್ಟಿ ಬೆಳ್ಳಾಡಿ, ಸತೀಶ್ ಎಮ್ ನಾಯಕ್, ಮಂಜುನಾಥ್ ಸೇನಾಪುರ, ಮಂಜುನಾಥ ಪೂಜಾರಿ ಬೆಳ್ಳಾಡಿ, ಪ್ರವೀಣ್ ಪಡುಕೋಣೆ ಮತ್ತಿತರರು ಉಪಸ್ಥಿತರಿದ್ದರು. ವಿಶ್ವನಾಥ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು

Leave a Reply