ರಾಜ್ಯದಲ್ಲಿ ಸುಸ್ಥಿರ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರದ ಅಗತ್ಯವಿದೆ: ಅಮಿತ್ ಶಾ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೇಂದ್ರ ಹಾಗೂ ರಾಜ್ಯದ ಡಬ್ಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಸ್ಥಿರವಾಗಿದೆ. ಪಿ.ಎಫ್.ಐನಂತಹ ಸಂಘಟನೆ ತಲೆಎತ್ತದಿರಬೇಕಾದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರವನ್ನು ಆರಿಸಬೇಕಿದೆ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಹೇಳಿದರು.

Call us

Click Here

ಅವರು ಶನಿವಾರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ಧಾಪುರದಲ್ಲಿ ರೋಡ್ ಶೋ ನಡೆಸಿ ಬಳಿಕ ಮಾತನಾಡಿ, ರಾಷ್ಟ್ರದಲ್ಲಿ ಪಿಎಫ್‍ಐಯಂತಹ ಸಂಘಟನೆಗಳನ್ನು ನಿಷೇಧ ಮಾಡಿ ವಿದ್ವಾಂಸಕ ಚಟುವಟಿಕೆಗಳ ನಿರ್ಮೂಲನೆ ಕಠಿಣ ಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದಲ್ಲಿ ಸುರಕ್ಷತೆಯ ವಾತಾವರಣ ನಿರ್ಮಾಣವಾಗಿದೆ. ಬಾಂಬ್ ದಾಳಿಯಂತಹ ಪ್ರಕರಣಗಳು ನಿಯಂತ್ರಣಕ್ಕೆ ಬಂದಿದೆ ಎಂದರು.

ಕರಾವಳಿ ಭಾಗದಲ್ಲಿ ರೈತರ ಹಾಗೂ ಮೀನುಗಾರರ ಹಿತಾಸಕ್ತಿಯ ಕಾಪಾಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ. ಮೀನುಗಾರಿಕಾ ಬಂದರು ಅಭಿವೃದ್ಧಿ ಮಾಡಿದೆ. ಅಡಿಕೆ ಕೃಷಿಕರಿಗೆ ಬೆಂಬಲ ನೀಡಿದ್ದರಿಂದ ಉತ್ತಮ ಧಾರಣೆ ಲಭಿಸಿದೆ. ಎಲ್ಲ ಸ್ತರಗಳ ಜನರಿಗೆ ಸಾಮಾಜಿಕ ನ್ಯಾಯ ನೀಡುವಲ್ಲಿ ಸರ್ಕಾರ ಬದ್ದವಾಗಿದೆ ಎಂದ ಅವರು, ಬೈಂದೂರಿನಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿದರೆ ವಿಜಯೋತ್ಸವದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.

ಬೈಂದೂರು ಕ್ಷೇತ್ರದ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಮಾತನಾಡಿ, ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಅಡಿಪಾಯ ಹಾಕಿದೆ ಅಮಿಶಾ ಅವರು ಸಿದ್ಧಾಪುರಕ್ಕೆ ಬಂದಿರುವುದೇ ಖುಷಿ ನೀಡಿದೆ. ಜನರ ಆಶೀರ್ವಾದ ನಮ್ಮ ಮೇಲಿರಲಿ ಎಂದರು.

ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ ನಾಯಕ ಕುಯಿಲಾಡಿ, ಬೈಂದೂರು ಮಂಡಲದ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಸೇರಿದಂತೆ ವಿವಿಧ ಶಕ್ತಿಕೇಂದ್ರಗಳ ಅಧ್ಯಕ್ಷ ಪದಾಧಿಕಾರಿಗಳು ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

Leave a Reply