ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಭಾನುವಾರ ಸಿದ್ಧಾಪುರ ಪೇಟೆಯಲ್ಲಿ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.
ತಲ್ಲೂರು ನೇರಳಕಟ್ಟೆ, ತ್ರಾಸಿ – ಗುಜ್ಜಾಡಿ, ವಂಡ್ಸೆ ಪೇಟೆ ಹಾಗೂ ಸಿದ್ಧಾಪುರದಲ್ಲಿ ರೋಡ್ ಶೋ ಹಮ್ಮಿಕೊಳ್ಳಲಾಗಿತ್ತು. ವಂಡ್ಸೆ ಸಿದ್ಧಾಪುರದ ರೋಡ್ ಶೋ ವೇಳೆ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರುಗಳಾದ ಸಂಪಿಗೇಡಿ ಸಂಜೀವ ಶೆಟ್ಟಿ, ಕೆ. ಬಾಬು ಶೆಟ್ಟಿ, ಪ್ರಸನ್ನಕುಮಾರ್ ಶೆಟ್ಟಿ ಸೇರಿದಂತೆ ಹಲವರು ಜೊತೆಗಿದ್ದರು.