ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕನ್ನಡದ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ತಮ್ಮ ಹುಟ್ಟೂರು ಕೆರಾಡಿಯಲ್ಲಿ ಮತದಾನ ಮಾಡಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಕೆರಾಡಿ 1ನೇ ಬೂತ್‍ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದ ಅವರು, ಮತದಾನ ನಮ್ಮೆಲ್ಲರ ಹಕ್ಕುಬೈಂದೂರು ವಿಧಾನಸಭಾ ಕ್ಷೇತ್ರದ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್‍ನಲ್ಲಿ ಮತ ಚಲಾಯಿಸಿದ ಅವರು, ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಯಾಗಿರುವುದು ನಮಗೆ ಹೆಮ್ಮೆ. ಹಾಗೆಯೇ, ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ, ಜವಾಬ್ದಾರಿ ಕೂಡ.. ಉತ್ತಮ ಸಮಾಜದ ನಿರ್ಮಾಣಕ್ಕಾಗಿ, ಸಮರ್ಥ ಜನಪ್ರತಿನಿಧಿಯ ಆಯ್ಕೆಗಾಗಿ ತಪ್ಪದೇ ಮತ ಚಲಾಯಿಸಿ ಎಂದು ಕರೆ ನೀಡಿದರು.










