Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೇ.13ರಂದು ಮತ ಎಣಿಕೆ, ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ
    ಉಡುಪಿ ಜಿಲ್ಲೆ

    ಮೇ.13ರಂದು ಮತ ಎಣಿಕೆ, ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ, ಮತ ಎಣಿಕೆ ಕಾರ್ಯವು ಮೇ 13ರಂದು ಉಡುಪಿ ಬ್ರಹ್ಮಗಿರಿ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯಲ್ಲಿ ನಡೆಯಲಿದ್ದು, ಜಿಲ್ಲೆಯಾದ್ಯಂತ ಮೇ 13ರ ಬೆಳಿಗ್ಗೆ 5 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

    Click Here

    Call us

    Click Here

    ಮತಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ನಂತರ ಕಾನೂನು ಸುವ್ಯವಸ್ಥೆಯನ್ನು ಕಾಯ್ದಕೊಂಡು, ಶಾಂತಿಯನ್ನು ಕಾಪಾಡುವ ಸಲುವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ಮತ್ತು ಸುವ್ಯವಸ್ಥೆ, ಶಾಂತಿಪಾಲನೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 (1) ರನ್ವಯ ಜಿಲ್ಲೆಯಾದ್ಯಂತ ಮೇ 13 ರಂದು ಬೆಳಿಗ್ಗೆ 5 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗುತ್ತದೆ.

    ಷರತ್ತುಗಳು:

    1. ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ, ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದನ್ನು ನಿಷೇಧಿಸಿದೆ.
    2. ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ನಿಷೇಧಿಸಿದೆ.
    3. ಚುನಾವಣೆಯ ಮತ ಎಣಿಕೆ ಫಲಿತಾಂಶದ ವಿಜಯೋತ್ಸವದ ಸಮಯದಲ್ಲಿ ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿದ
    4. ಈ ಅವಧಿಯಲ್ಲಿ ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಗಧೆ, ಕೋಲು, ಚೂರಿ, ದೊಣ್ಣೆ, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಅಥವಾ ಮಾರಕವಾಗುವ ಇನ್ನಾವುದೇ ವಸ್ತುಗಳನ್ನು ಧರಿಸುವುದನ್ನು ಮತ್ತು ಯಾವುದೇ ಕಾರಕ ಯಾ ಸ್ಫೋಟಕ ವಸ್ತುಗಳು/ಪಟಾಕಿ | ಸಿಡಿಮದ್ದು ಹೊಂದುವುದನ್ನು ನಿಷೇಧಿಸಿದೆ.
    5. ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ಕಲ್ಲುಗಳನ್ನು ಒಟ್ಟುಗೂಡಿಸುವುದು, ಯಾ ಕ್ಷಿಪಣಿಗಳು ಅಥವಾ ಕ್ಷಿಪಣಿಯಾಗಿ ಉಪಯೋಗಿಸಲ್ಪಡುವ ಇತರ ಆಯುಧಗಳು ಮತ್ತು ಸಾಧನ ಸಾಮಾಗ್ರಿಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.
    6. ಈ ಅವಧಿಯಲ್ಲಿ ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು, ಪದ ಹಾಡುವುದು, ಗಾಯನ ಮಾಡುವುದು, ಆವೇಶ ಭಾಷಣ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು, ಚೇಷ್ಟೆ ಮಾಡುವುದು, ಚಿತ್ರಗಳ ಪ್ರದರ್ಶನ ತಯಾರಿಸುವುದು ಯಾ ಪುಸಾರ ಮಾಡುವುದು, ಗುರುತುಗಳು, ಪಕಟಣಾ ಪತ್ರಿಕೆಗಳ ಯಾ ಇತರ ಯಾವುದೇ ವಸ್ತುಗಳ ಪ್ರದರ್ಶನದಿಂದ ಸಭ್ಯತನ, ಸದಾಚಾರ, ಸಾರ್ವಜನಿಕ ಹಿತ ಯಾ ಭದ್ರತೆ ಶಿಥಿಲಗೊಳ್ಳುವಂತಹ ಯಾ ಸರಕಾರವನ್ನು ಕೆದಕುವ ಯಾ ಅಪರಾಧವೆಸಗುವರೇ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.
    7. ಈ ನಿಷೇದಾಜ್ಞೆ ಆದೇಶವು ಸರಕಾರದಿಂದ ಯಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ, ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಸರಕಾರಿ ನೌಕರರು ಕರ್ತವ್ಯ ನಿರ್ವಹಣೆಯ ವೇಳೆ ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ.
    8. ಈ ನಿಷೇದಾಜ್ಞೆ ಆದೇಶವು ಕೆಳಗೆ ಸಹಿ ಮಾಡಿರುವವರ ಅಥವಾ ಉಪವಿಭಾಗದ ದಂಡಾಧಿಕಾರಿ, ತಾಲೂಕು ದಂಡಾಧಿಕಾರಿಯವರ ಪೂರ್ವಾನುಮತಿಯಂತೆ ನಡೆಯುವ ಕಾರ್ಯಕ್ರಮಗಳಿಗೆ ಹಾಗೂ ಶವ ಮೆರವಣಿಗೆ, ಮದುವೆ ಮೆರವಣಿಗೆ ಮತ್ತು ಧಾರ್ಮಿಕ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ.
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    18 + 12 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.