Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಖ್ಯಾತ ನೇತ್ರ ತಜ್ಞ ಡಾ। ಭುಜಂಗ ಶೆಟ್ಟಿ ನಿಧನ
    ನಿಧನ

    ಕುಂದಾಪುರ: ಖ್ಯಾತ ನೇತ್ರ ತಜ್ಞ ಡಾ। ಭುಜಂಗ ಶೆಟ್ಟಿ ನಿಧನ

    Updated:20/05/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಮೇ19:
    ನಾರಾಯಣ ನೇತ್ರಾಯಲಯದ ಅಧ್ಯಕ್ಷ,  ಕುಂದಾಪುರ ತಾಲೂಕು ಶಂಕರನಾರಾಯಣ ಮೂಲದ ಡಾ। ಭುಜಂಗ ಶೆಟ್ಟಿ (69) ಇಂದು ನಿಧನರಾದರು.

    Click Here

    Call us

    Click Here

    ಇಂದು ಆಸ್ಪತ್ರೆಗೆ ತೆರಳಿ ಕಣ್ಣಿನ ರೋಗಿಗಳಿಗೆ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು. ಹೃದಯಾಘಾತ ಸಂಭವಿಸಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಭುಜಂಗ ಶೆಟ್ಟಿ ಅವರು ದೇಶದ ಖ್ಯಾತ ನೇತ್ರ ತಜ್ಞರಾಗಿದ್ದರು.

    ಭುಜಂಗ ಶೆಟ್ಟಿ ಅವರು ಬಾಲ್ಯದ ಶಿಕ್ಷಣವನ್ನು ಶಂಕರನಾರಾಯಣ ಹಾಗೂ ಸಾಗರ ಕಾರ್ಗಲ್‌ನಲ್ಲಿ ಪಡೆದಿದ್ದರು. 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು. 80ರ ದಶಕದಲ್ಲಿ ಸಣ್ಣ ಕ್ಲಿನಿಕ್ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿದ ಡಾ. ಭುಜಂಗ ಶೆಟ್ಟಿ ನಾರಾಯಣ ನೇತ್ರಾಯಲದ ಅಧ್ಯಕ್ಷರಾಗಿದ್ದರು.

    ಭುಜಂಗ ಶೆಟ್ಟಿ ನಾರಾಯಣ ನೇತ್ರಾಲಯದಲ್ಲಿ ವಿವಿಧ ಉಪವಿಭಾಗಗಳ ಅಭಿವೃದ್ಧಿಯನ್ನು ಸಕ್ರಿಯವಾಗಿ ಪ್ರೋತ್ಸಾಹಿಸಿದ್ದಾರೆ ಮತ್ತು ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಕಾರಣರಾಗಿದ್ದರು. ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಯಲ್ಲಿ ನೈಪುಣ್ಯತೆ ಹೊಂದಿದ್ದರು. ಅವರು ರಿವರ್ಸ್ ಡಯಾಬಿಟಿಸ್ ಆಹಾರ ಕ್ರಮದ ಮೂಲಕ ಮಧುಮೇಹ ಗೆದ್ದಿದ್ದರು. ಡಾ. ರಾಜಕುಮಾರ್ ಕುಟುಂಬಕ್ಕೆ ನಿಟಕವರ್ತಿಯಾಗಿದ್ದ ಡಾ. ಭುಜಂಗ ಶೆಟ್ಟಿ ಅವರು ಡಾ. ಪುನಿತ್ ರಾಜಕುಮಾರ್ ಅವರ ನಿಧನದ ಬಳಿಕ ಅವರ ಕಣ್ಣುಗಳನ್ನು ನಾಲ್ಕು ಮಂದಿಗೆ ಅಳವಡಿಸುವಲ್ಲಿ ಯಶಸ್ವಿಯಾಗಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಿವೃತ್ತ ಮುಖ್ಯ ಶಿಕ್ಷಕ, ಬಿಲ್ಲವ ಸಮಾಜದ ಮಾಜಿ ಅಧ್ಯಕ್ಷ ಶ್ರೀನಿವಾಸ ಉಬ್ಬೇರಿ ನಿಧನ

    17/02/2026

    ಶಿರೂರು ಗ್ರಾಮ ಪಂಚಾಯತ್‌ ಮಾಜಿ ಸದಸ್ಯ ದಿನೇಶ್ ಕುಮಾರ್‌ ನಿಧನ

    16/02/2026

    ಕುಂದಾಪುರ: ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಜಯಾನಂದ ಖಾರ್ವಿ ನಿಧನ

    26/05/2025
    Leave A Reply Cancel Reply

    8 − 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.