ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.
ಸರತಿ ಸಾಲಿನಲ್ಲಿಯೇ ದೇವಳ ಪ್ರವೇಶಿಸಿದ ನಾಯಕರು, ದೇವರಿಗೆ ಪೂಜೆ ಸಲ್ಲಿಸಿದರು. ಈ ವೇಳೆ ದೇವಳದ ವತಿಯಿಂದ ಸಂಸದ – ಶಾಸಕರನ್ನು ಗೌರವಿಸಲಾಯಿತು.
ಈ ವೇಳೆ ದೇವಳದ ಮಾಜಿ ಧರ್ಮದರ್ಶಿ ಕೃಷ್ಣಪ್ರಸಾದ್ ಅಡ್ಯಂತಾಯ, ಉದ್ಯಮಿಗಳಾದ ಬಿ.ಎಸ್. ಸುರೇಶ್ ಶೆಟ್ಟಿ, ವೆಂಕಟೇಶ ಕಿಣಿ ಮೊದಲಾದವರು ಉಪಸ್ಥಿತರಿದ್ದರು.