ಕುಂದಾಪುರ: ಗಣಿ ಇಲಾಖೆಯ ಕಾರ್ಯಾಚರಣೆ – ಅನಧಿಕೃತ ಮರಳು ದಕ್ಕೆಯಲ್ಲಿದ್ದ 5 ಲಾರಿಗಳು ವಶಕ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹಟ್ಟಿಯಂಗಡಿ ಹಾಗೂ ಹೆಮ್ಮಾಡಿ ಪರಿಸರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ಕಾರ್ಯಾಚರಣೆ ನಡೆಸಿ 5 ಟಿಪ್ಪರ್ ಲಾರಿಗಳನ್ನು ವಶ ಪಡಿಸಿಕೊಂಡಿದ್ದಾರೆ.

Call us

Click Here

ಹಟ್ಟಿಯಂಗಡಿ ಗ್ರಾಮದ ಹಟ್ಟಿಕುದ್ರು ಹಾಗೂ ಹೆಮ್ಮಾಡಿ ಗ್ರಾಮದ ಕನ್ನಡಕುದ್ರು ಎಂಬಲ್ಲಿ ಪಂಚಗಂಗವಲ್ಲಿ ನದಿಯಿಂದ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸ್ವೀಕೃತವಾದ ದೂರಿನ ಮೇರೆಗೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು ಅವರ ಮಾರ್ಗದರ್ಶನದಲ್ಲಿ ಶುಕ್ರವಾರ ಮೇ. 19 ರ ರಾತ್ರಿ 10 ಗಂಟೆಗೆ ಹಟ್ಟಿಕುದ್ರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಮರಳು ದಕ್ಕೆಯಲ್ಲಿದ್ದ 4 ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ರಾತ್ರಿ 1 ಗಂಟೆಗೆ ಕನ್ನಡಕುದ್ರು ಎಂಬಲ್ಲಿ ದಾಳಿ ನಡೆಸಿ ಮರಳು ಸಹಿತ 1 ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ಭೂವಿಜ್ಞಾನಿಯವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 4 ಲಾರಿಗಳನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಹಾಗೂ 1 ಲಾರಿಯನ್ನು ಕುಂದಾಪುರ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ.

Leave a Reply