ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್: ಕಂಬದಕೋಣೆ ಶಾಖೆಯ ಗ್ರಾಹಕರ ಸಭೆ ಹಾಗೂ ಆರೋಗ್ಯ ಮಾಹಿತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಗ್ರಾಹಕರ ಸ್ಪಂದನೆ ಹಾಗೂ ಸಕ್ರಿಯ ಪಾಲ್ಗೊಳ್ಳುವಿಕೆಯಿಂದಲೇ ಸಹಕಾರಿ ಸಂಘಗಳು ಬ್ಯಾಂಕಿಂಗ್ ವಿಭಾಗದಲ್ಲಿ ಗರಿಷ್ಠ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗಿದೆ. ಇದು ಇನ್ನಷ್ಟು ಗ್ರಾಹಕರಿಗೆ ಸೇವೆಯನ್ನು ವಿಸ್ತರಿಸಲು ಸಹಕಾರಿಯಾಗಿದೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು.

Call us

Click Here

ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಇದರ ಕಂಬದಕೋಣೆ ಶಾಖೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಇತ್ತೀಚಿಗೆ ಹಮ್ಮಿಕೊಳ್ಳಲಾದ ಗ್ರಾಹಕರ ಸಭೆ ಹಾಗೂ ಆಯುರ್ವೇದ ಆರೋಗ್ಯ ಮಾಹಿತಿ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ವೇಳೆ ಅದೃಷ್ಟಶಾಲಿ ಸದಸ್ಯರ ಆಯ್ಕೆ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಸಂಘವನ್ನು ಗುರುತಿಸಲಾಯಿತು.

ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಸಂಸ್ಥೆಯ ಸದಸ್ಯರಿಗೆ ಆರೋಗ್ಯ ಮಾಹಿತಿ ನೀಡಿದರು. ಈ ವೇಳೆ ಕಂಬದಕೋಣೆ ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಶೆಟ್ಟಿ, ಕಂಬದಕೋಣೆ ರೈ.ಸೇ.ಸ.ಸಂಘದ ನಿರ್ದೇಶಕ ಗುರುರಾಜ ಹೆಬ್ಬಾರ್, ಸಂಘದ ನಿವೃತ್ತ ಸಿಇಓ ಸೀತಾರಾಮ ಮಡಿವಾಳ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ವಿನಾಯಕ ರಾವ್ ಮರವಂತೆ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ವಂದಿಸಿದರು. ಕಂಬದಕೋಣೆ ಶಾಖಾ ಪ್ರಬಂದಕ ರಾಜೇಂದ್ರ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

Click here

Click here

Click here

Click Here

Call us

Call us

Leave a Reply