ಕೋಟೇಶ್ವರ ಸರಕಾರಿ ಪದವಿ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಬಡ್ತಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಮ್. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ಉಪನ್ಯಾಸಕರುಗಳು ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ಪಡೆದಿದ್ದಾರೆ.

Call us

Click Here

ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಶೇಖರ್ ಬಿ ಅವರು ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ಹೊಂದಿದ್ದಾರೆ. ಪಿಎಚ್ಡಿ ಪದವಿಯೊಂದಿಗೆ ಹೊಂದಿರುವ ಅವರ 20 ಸಂಶೋಧನಾ ಪ್ರಬಂಧಗಳು, ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿದೆ.

ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ಶ್ರೀಮತಿ ಅಡಿಗ ಅವರು ಪ್ರಾಧ್ಯಾಪಕ ಹುದ್ದೆಗೆ ಭಡ್ತಿ ಪಡೆದಿದ್ದಾರೆ. ಗಣಿತಶಾಸ್ತ್ರದಲ್ಲಿ ಪಿಎಚ್ಡಿ ಪದವಿ ಪಡೆದಿರುವ ಅವರ 24 ಗಣಿತ ಸಂಶೋಧನಾ ಪ್ರಬಂಧಗಳು ಮತ್ತು 7 ಇತರ ಪ್ರಬಂಧಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿದೆ. ಶ್ರೀಮತಿ ಅಡಿಗ ಅವರು ಮಂಗಳೂರು ವಿಶ್ವವಿದ್ಯಾನಿಲಯ ಸಂಯೋಜಿತ ಪದವಿ ಕಾಲೇಜುಗಳಲ್ಲಿ ಪ್ರಾಧ್ಯಪಕರಾಗಿ ಬಡ್ತಿ ಪಡೆದ ಗಣಿತಶಾಸ್ತ್ರದ ಮೊದಲ ಪ್ರಾಧ್ಯಾಪಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Leave a Reply