ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ವಿದ್ಯಾನಿಧಿ – ವಿದ್ಯಾರ್ಥಿ ವೇತನ ವಿತರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ 8ನೇ ತರಗತಿಯಿಂದ ಪದವಿ ತನಕ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದಾರ್ಥಿಗಳಿಗೆ ವಿದ್ಯಾನಿಧಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಇತ್ತೀಚಿಗೆ ಜರುಗಿತು.

Call us

Click Here

ಉಡುಪಿ ಜಿಲ್ಲಾ ಶ್ರೀಮದ್ಭಗವದ್ದೀತಾ ಜಯಂತಿ ಆಚರಣಾ ಸಮಿತಿ ಪ್ರಧಾನ ಸಂಚಾಲಕ ಬಿ. ರಾಮಕೃಷ್ಣ ಶೇರುಗಾರ್ ವಿದ್ಯಾನಿಧಿ ವಿತರಿಸಿ ಮಾತನಾಡಿ ಕೆಲವು ವರ್ಷಗಳ ಹಿಂದೆ ಶಿಕ್ಷಣ ಪಡೆಯಲು ಹಿಂದೇಟು ಹಾಕುತ್ತಿದ್ದ ಗ್ರಾಮದಲ್ಲಿ ಶ್ರೀ ರಾಮಕೃಷ್ಣ ಕುಟೀರದ ಮೂಲಕ ಹಲವಾರು ವಿದ್ಯಾರ್ಥಿಗಳು ಇಂದು ಉನ್ನತ ವ್ಯಾಸಂಗವನ್ನೂ ಪೂರೈಸಿರುವುದು ಗಮನಾರ್ಹ ಸಾಧನೆ. ಸ್ವಾಮಿ ಸತ್ಯಸ್ವರೂಪಾನಂದರ ಇಚ್ಛಾಶಕ್ತಿಯಿಂದ ಇದು ಸಾಧ್ಯವಾಗಿದೆ. ವಿದ್ಯಾರ್ಥಿ ವೇತನ ಪಡೆದು ಉತ್ತಮ ಶಿಕ್ಷಣ ಉದ್ಯೋಗ ಪಡೆದುಕೊಳ್ಳುವುದರ ಜತೆಗೆ ಇತರರಿಗೂ ಸಹಕಾರ ಮಾಡುವ ಗುಣ ಬೆಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ ಕಳೆದ 22 ವರ್ಷಗಳಿಂದಲೂ ಶ್ರೀ ಸಿದ್ಧಿವಿನಾಯಕ ಸಾಂಸ್ಕೃತಿಕ ಕೇಂದ್ರದ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಲಿಕೆಗೆ ಪ್ರೋತ್ಸಾಹ ನೀಡುತ್ತಾ ಬರಲಾಗಿದೆ. ಕುಟೀರದ ಮೂಲಕ ಹಲವು ಸಾಮಾಜಿಕ, ಧಾರ್ಮಿಕ ಕಾರ್ಯಗಳನ್ನು ಮಾಡಲಾಗಿತ್ತು. ದಾನಿಗಳ ನೆರವಿನಿಂದ ಸೇವಾ ಕಾರ್ಯದಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜನಾರ್ದನ, ಕಂಬದಕೋಣೆ, ಸಂತೋಷ ಮಧ್ಯಸ್ತ ಕೋಟ ಉಪಸ್ಥಿತರಿದ್ದರು. ಹಲವು ವರ್ಷಗಳಿಂದ ರಾಮಕೃಷ್ಣ ಶೇರುಗಾರ್ ಅವರು ಈ ಭಾಗದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಿಸುತ್ತಿದ್ದು, ಈ ವರ್ಷ ಪ್ರೀತೇಶ್ ಭಟ್ ಸಿದ್ದಾಪುರ ಅವರೂ ಕೈಜೋಡಿಸಿದ್ದರು.

 ಶಿಕ್ಷಕಿ ಜ್ಯೋತಿ ಹೆಚ್.ಎಸ್ ಕಾರ್ಯಕ್ರಮ ನಿರೂಪಿಸಿ ನಾಗಶ್ರೀ ಮಧ್ಯಸ್ತ ಧನ್ಯವಾದವನ್ನು ಸಮರ್ಪಿಸಿದರು.

Click here

Click here

Click here

Click Here

Call us

Call us

Leave a Reply