ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮತ್ಸ್ಯ ಸಂಪತ್ತು ವೃದ್ದಿ ಮತ್ತು ಮೀನುಗಾರರ ಶ್ರೇಯಸ್ಸಿಗಾಗಿ ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದಲ್ಲಿ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು ಇವರು ದುರ್ಗಾಹೋಮ ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಶಂಕರ ಖಾರ್ವಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿರ್ದೇಶಕರಾದ ಚಂದ್ರ ಖಾರ್ವಿ ಲೈಟ್ಹೌಸ್, ಮೋಹನ್ ಖಾರ್ವಿ, ರಾಜೇಶ್ ಸಾರಂಗ, ಸರೋಜಿನಿ, ಜ್ಯೋತಿ ಖಾರ್ವಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ಮತ್ತಿತರರು ಉಪಸ್ಥಿತರಿದ್ದರು.