ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯದ ಕರಾವಳಿಯಲ್ಲಿ ಕಾಣಿಸಿಕೊಂಡ ಬಿಪರ್ಜಾಯ್ ಚಂಡಮಾರುತದಿಂದಾಗಿ ಮರವಂತೆಯಲ್ಲಿ ಕಡಲ್ಕೊರೆತ ಉಂಟಾಗಿದ್ದು, ಪರಿಣಾಮವಾಗಿ ಫಿಷರೀಸ್ ರಸ್ತೆ ಬಿರುಕು ಕಾಣಿಸಿಕೊಂಡಿದೆ.
ಕಳೆದ ಭಾರಿ ಕಡಲಕೊರೆತದಿಂದಾಗಿ ಕಾಂಕ್ರೀಟ್ ಮಾಡಲಾಗಿದ್ದ ಫಿಶರಿಸ್ ರಸ್ತೆ ಸಂಪೂರ್ಣ ಕೊಚ್ಚಿಹೊಗಿದ್ದಲ್ಲದೇ ಸಮುದ್ರ ಬದಿಯ ಮನೆಯ ಗೋಡೆಯಲ್ಲಿಯೂ ಬಿರುಕು ಕಾಣಿಸಿಕೊಂಡಿತ್ತು. ಸ್ವತಃ ಮುಖ್ಯಮಂತ್ರಿ, ಕಂದಾಯ ಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ತಾತ್ಕಾಲಿಕ ಪರಿಹಾರ ಒದಗಿಸಿದ್ದರು. ಈ ಭಾರಿಯ ಕಡಲಕೊರೆತದ ಹೊಡೆತಕ್ಕೆ ರಸ್ತೆ ಮತ್ತೆ ಕೊಚ್ಚಿ ಹೋಗುವ ಸಾಧ್ಯತೆ ಎದುರಾಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಗುರುರಾಜ ಗಂಟಿಹೊಳೆ ಅವರು, ಕಡಲತಡಿಯ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ. ನಿಮ್ಮೊಂದಿಗೆ ನಾನು, ಇಲಾಖೆ ಇದೆ. ತುರ್ತು ಸಂದರ್ಭದ ಎಲ್ಲಾ ಅಗತ್ಯ ಕ್ರಮವನ್ನು ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಭರವಸೆ ನೀಡಿದರು.