ಕುಂದಾಪುರ: ಸಂತ ಮೇರಿ ಪ.ಪೂ. ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಉದ್ಘಾಟನೆ, ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಸಂತ ಮೇರಿ ಪ ಪೂ ಕಾಲೇಜಿನಲ್ಲಿ ಶನಿವಾರ ಪ್ರಸಕ್ತ ಶೈಕ್ಷಣಿಕ ವರ್ಷದ ಉದ್ಘಾಟನಾ ಕಾರ್ಯಕ್ರಮ ಜರುಗಿತು.

Call us

Click Here

ಸಂತ ಮೇರಿ ಪ.ಪೂ ವಿದ್ಯಾಸಂಸ್ಥೆಗಳ ಸಂಚಾಲಕರಾದ ಫಾದರ್ ಸ್ಟ್ಯಾನಿ ತಾವರೊ ಅವರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ,ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮುಖ್ಯ. ಪರಸ್ಪರ ತಮ್ಮನ್ನು ವಿಮರ್ಶಿಸಿಕೊಳ್ಳಬೇಕು. ಶಿಸ್ತು ಜೀವನದ ಅತಿ ಮುಖ್ಯ ಅಂಗ ಎನ್ನುತ್ತಾ ಸಂಸ್ಥೆಯಲ್ಲಿ ದಾಖಲಾದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿದ್ದ ಸಂತ ಜೋಸೆಫ ಕಾನ್ವೆಂಟಿನ ಸುಪಿರಿಯರ್ ಸಿಸ್ಟರ್ ಸುಪ್ರಿಯ ಎ. ಸಿ ಅವರು ಪ್ರಥಮ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಅನೇಕ ಮೌಲ್ಯಯುತ ಪ್ರಶ್ನೆಗಳನ್ನು ಕೇಳಿ ಉತ್ತರ ನೀಡಿದ ವಿದ್ಯಾರ್ಥಿಗಳಿಗೆ ಪೆನ್ನನ್ನು ನೀಡಿ ಹುರಿದುಂಬಿಸಿದರು. ಅವರು ವಿದ್ಯಾರ್ಥಿಗಳಿಗೆ ಪ್ರತಿಯೊಬ್ಬರು ಉತ್ತಮವಾಗಿ ಕಲಿಯಬೇಕು. ಒಬ್ಬರನೊಬ್ಬರು ಗೌರವಿಸಬೇಕು.ತಾವೆಲ್ಲರೂ ಸಂಸ್ಥೆಯ ಏಳಿಗೆಗಾಗಿ ಶ್ರಮಿಸಬೇಕು ಎಂದರು.

ಇದೆ ವೇಳೆ ಕಛೇರಿ ಸಹಾಯಕ ಗುಮಾಸ್ತರಾಗಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಮೇಬಲ್ ಡಿಸೋಜಾರವರನ್ನು ಅವರನ್ನು ಸನ್ಮಾನಿಸಿ, ಅವರ ಸೇವೆಗೆ ಕೃತಜ್ಞತೆಗಳನ್ನು ಸಲ್ಲಿಸಲಾಯಿತು. ಹತ್ತನೆಯ ತರಗತಿಯ ಸಾಧನೆಗೆ ಶ್ಲಾಘಿಸಿ ಅತ್ತ್ಯುತ್ತಮ ಶ್ರೇಣಿಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹೋಲಿ ರೋಸರಿ ಚರ್ಚಿನ ಸಹಾಯಕ ಧರ್ಮ ಗುರುಗಳಾದ ಫಾದರ್ ಅಶ್ವಿನ್ ಅರಾನ್ಹಾರವರು ಗೌರವ ಅತಿಥಿಯಾಗಿ ಉಪಸ್ಥಿತರಿದ್ದು, ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಸ್ಪರ್ಧೆಯಲ್ಲಿ ಸ್ಪರ್ಧಿಸಿ ವಿಜೇತರಾಗಿದ್ದಕ್ಕಾಗಿ ಬಹುಮಾನ ವಿತರಿಸಿ ಶುಭ ಹಾರೈಸಿದರು.

Click here

Click here

Click here

Click Here

Call us

Call us

ಕಾಲೇಜಿನ ಪ್ರಾಂಶುಪಾಲರಾದ ರೇಷ್ಮಾ ಫೆರ್ನಾಂಡಿಸ್ ಹಾಗೂ ಉಪ ಪ್ರಾಂಶುಪಾಲರಾದ ಮಂಜುಳಾ ನಾಯರ್ ರವರು ಉಪಸ್ಥಿತರಿದ್ದು,ಶುಭ ಹಾರೈಸಿದರು. ಉಪನ್ಯಾಸಕರಾದ ಶರ್ಮಿಳಾ ಮಿನೇಜಸ್ ಮತ್ತು ನಾಗರಾಜ ಶೆಟ್ಟಿ ಕ್ರಮವಾಗಿ ಅತ್ತ್ಯುತ್ತಮ ಶ್ರೇಣಿಯ ವಿದ್ಯಾರ್ಥಿಗಳ ಹೆಸರನ್ನು ಹಾಗೂ ಸನ್ಮಾನ ಪತ್ರವನ್ನು ವಾಚಿಸಿದರು.

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭ ವಾಗಿ ವಿದ್ಯಾರ್ಥಿನಿ ಆಶಾ ಸ್ವಾಗತಿಸಿದರು. ಅಲ್ವಿಟಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿ, ರಮ್ಯಾ ಧನ್ಯವಾದ ಸಮರ್ಪಿಸಿದರು.

Leave a Reply