ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ರೋಟರಿ ಕಲಾಮಂದಿರಲ್ಲಿ ಆಯೋಜಿಸಲಾಗಿತ್ತು.
ಕುಂದಾಪುರ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಉಪ ನಿರೀಕ್ಷಕರಾದ ಪ್ರಸಾದ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಗಳ ಪರಿಣಾಮ ಮತ್ತು ಅವುಗಳಿಂದ ಆಗಬಹುದಾದ ಅನಾಹುತಗಳ ಬಗ್ಗೆ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ಕಿರಣ್ ಹೆಗ್ಡೆ, ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ಚಂದ್ರ ಶೆಟ್ಟಿ, ಸಹ ಶಿಕ್ಷಕ ಗಣೇಶ್ ಕಾಂಚನ್ ಉಪಸ್ಥಿತರಿದ್ದರು.