ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ 9 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೈಂದೂರು ಬಿಜೆಪಿ ವತಿಯಿಂದ ಉಪ್ಪುಂದ ಕಂಚಿಕಾನುವಿನಲ್ಲಿ ಏರ್ಪಡಿಸಿದ್ದ “ಸಾರ್ವಜನಿಕ ಸಂಪರ್ಕ ಅಭಿಯಾನ ಮತ್ತು ನಾಗೂರು ಲಲಿತಕೃಷ್ಣ ಸಭಾಂಗಣದಲ್ಲಿ ಏರ್ಪಡಿಸಿದ್ದ ವರ್ತಕರ ಸಭೆ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೋಳೆ, ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು ಸೇರಿದಂತೆ ಪಕ್ಷದ ಮುಖಂಡರು ಮತ್ತು ವರ್ತಕರು ಉಪಸ್ಥಿತರಿದ್ದರು.