ಕೊಲ್ಲೂರು ದೇವಳಕ್ಕೆ ತೆರಳಿದ್ದ ಮಹಿಳೆಯ ಚಿನ್ನ ಎಗರಿಸಿದ್ದ ಆರೋಪಿ ಬಂಧನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ದರ್ಶನಕ್ಕೆ ತೆರಳಿದ್ದ ಮಹಿಳೆಯ ಚಿನ್ನಾಭರಣಗಳಿದ್ದ ಪರ್ಸ್ ಕದ್ದಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮೂಲದ ಗಿರೀಶ್ ಬಿ.ಜಿ. (32) ಬಂಧಿತ ಆರೋಪಿ.

Call us

Click Here

ಜೂ.4ರಂದು ಸುರತ್ಕಲ್ ನಿವಾಸಿ ಪ್ರವೀಣ್ ಎನ್ನುವರು ಪತ್ನಿಯೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದ್ದು, ಈ ವೇಳೆ ಚಿನ್ನಾಭರಣವನ್ನು ತಮ್ಮೊಂದಿಗೆ ಕೊಂಡೊಯ್ದುದ್ದಾರೆ. ಚಿನ್ನಾಭರಣಗಳನ್ನು ಚಿಕ್ಕ ಪರ್ಸ್ ನಲ್ಲಿ ಹಾಕಿ ವ್ಯಾನಟಿ ಬ್ಯಾಗ್ ನಲ್ಲಿಟ್ಟುಕೊಂಡಿದ್ದರು. ದೇವರ ದರ್ಶನ ಮಾಡಿ ಹೊರಗಡೆ ಬಂದಾಗ ವ್ಯಾನಟಿ ಬ್ಯಾಗ್ ಜೀಪ್ ಓಪನ್ ಆಗಿದ್ದು ಚಿನ್ನಾಭರಣಗಳಿದ್ದ ಚಿಕ್ಕ ಪರ್ಸ್ ಕಳವಾಗಿತ್ತ. ಒಟ್ಟು 13 ½ ಪವನ್ ಚಿನ್ನ [4 ಲಕ್ಷದ 75 ಸಾವಿರ ರೂ. ಮೌಲ್ಯ] ಕಳವಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಬಗ್ಗೆ ತನಿಖೆ ಕೈಗೊಂಡ ಕೊಲ್ಲೂರು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಾಸಗಿ ಬಸ್ಸಿನಲ್ಲಿ ಕೆಲಸ ಮಾಡುತ್ತಿದ್ದ ತೀರ್ಥಹಳ್ಳಿ ಮೂಲದ ಗಿರೀಶ್ ಬಿ.ಜಿ. ದೇವಸ್ಥಾನಕ್ಕೆ ಬಂದಿದ್ದ ವೇಳೆ ಚಿನ್ನ ಕಳವುಗೈದ ಬಗ್ಗೆ ಪ್ರಕರಣ ದಾಖಲಾಗಿದೆ. ಕಳವು ಮಾಡಿದ ಚಿನ್ನಾಭರಣಗಳಾದ 7½ ಪವನ್ ಚಿನ್ನದ ಚೈನ್, 3 ಪವನ್ ತೂಕದ ಎರಡು ಚಿನ್ನದ ಬಳೆ, 1½ ಪವನ್ ಚಿನ್ನದ ಚೈನ್, ½ ಪವನ್ ಚಿನ್ನದ ಬಳೆ, 1 ಪವನ್ ತೂಕದ 4 ಜೊತೆ ಚಿನ್ನದ ಕಿವಿ ಓಲೆ ಸಹಿತ ಒಟ್ಟು 108 ಗ್ರಾಂ ಆರೋಪಿಯಿಂದ ವಶಕ್ಕೆ ಪಡೆಯಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚಿಂದ್ರ ಹಾಕೆ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ ಟಿ., ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ಕೊಲ್ಲೂರು ಠಾಣೆ ಉಪನಿರೀಕ್ಷಕರಾದ ಜಯಶ್ರೀ, ಸುಧಾರಾಣಿ, ಸಿಬ್ಬಂದಿಗಳಾದ ನಾಗೇಂದ್ರ ಹಾಗೂ ಸಂದೀಪ್ ಕಾರ್ಯಾಚರಣೆ ನಡೆಸಿದ್ದರು.

Leave a Reply