ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ: ಬೈಂದೂರು – ವಂಡ್ಸೆ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷದ ರಾಜಕಾರಣ ನಡೆಸುತ್ತಾ, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋ ಗ ಪಡಿಸಿಕೊಳ್ಳುತ್ತಿರುವ ಮತ್ತು ಸಾಂವಿಧಾನಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ನಾಶಗೊಳಿಸುತ್ತಿದ್ದಾರೆ ಎಂದು ಆರೋಪಿಸಿ ಕೆ.ಪಿ.ಸಿ.ಸಿ ವತಿಯಿಂದ ರಾಹುಲ್ ಗಾಂಧಿಯವರ ಬೆಂಬಲವಾಗಿ ಇಂದು ದೇಶಾದ್ಯಂತ ಏಕಕಾಲದಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದ ಭಾಗವಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ನ ವತಿಯಿಂದ ಬುಧವಾರ ‘ಮೌನಪ್ರತಿಭಟನೆ’ ನಡೆಯಿತು.

Call us

Click Here

ಬೈಂದೂರು ಹೊಸ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ, ಕಾಂಗ್ರೆಸ್ ಮುಖಂಡರುಗಳಾದ ರಘುರಾಮ ಶೆಟ್ಟಿ ಬಿಜೂರು, ಎಸ್. ರಾಜು ಪೂಜಾರಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಕೆ. ಬಾಬು ಶೆಟ್ಟಿ, ಸದಾಶಿವ ಪಡುವರಿ, ನಾಗರಾಜ ಗಾಣಿಗ ಬಂಕೇಶ್ವರ, ಡಾ. ಸುಬ್ರಹ್ಮಣ್ಯ ಭಟ್, ನರಸಿಂಹ ಹಳಗೇರಿ, ಅರವಿಂದ ಪೂಜಾರಿ, ಶೇಖರ ಪೂಜಾರಿ ಉಪ್ಪುಂದ, ಜಗದೀಶ ದೇವಾಡಿಗ, ಮೋಹನ ಪೂಜಾರಿ ಉಪ್ಪುಂದ, ಗಣೇಶ್ ಪೂಜಾರಿ, ಸುಬ್ರಹ್ಮಣ್ಯ ಪೂಜಾರಿ ಯಡ್ತರೆ, ನಾಗರಾಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ವಂಡ್ಸೆ ಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರುಗಳಾದ ವಂಡಬಳ್ಳಿ ಜಯರಾಮ ಶೆಟ್ಟಿ, ಉದಯಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:
► ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ: ಬೈಂದೂರು – ವಂಡ್ಸೆ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ – https://kundapraa.com/?p=67665 .

Leave a Reply

Your email address will not be published. Required fields are marked *

fourteen + 3 =