Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಾನಗರಿಯಲ್ಲಿ ಜುಲೈ 23ರಂದು ’ಕುಂದಾಪ್ರ ಕನ್ನಡ ಹಬ್ಬ’. ಗಡ್ಜ್ ಇತ್ತ್ ಅಂಬ್ರ್ ಹೋಯ್
    ಊರ್ಮನೆ ಸಮಾಚಾರ

    ಮಹಾನಗರಿಯಲ್ಲಿ ಜುಲೈ 23ರಂದು ’ಕುಂದಾಪ್ರ ಕನ್ನಡ ಹಬ್ಬ’. ಗಡ್ಜ್ ಇತ್ತ್ ಅಂಬ್ರ್ ಹೋಯ್

    Updated:21/07/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು:
    ಮಹಾನಗರಿಯಲ್ಲಿ 5ನೇ ಭಾರಿಗೆ ಆಯೋಜಿಸಲಾಗುತ್ತಿರುವ “ಕುಂದಾಪ್ರ ಕನ್ನಡ ಹಬ್ಬ”ವನ್ನು ಜುಲೈ 23ರ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ ಹೇಳಿದರು.

    Click Here

    Call us

    Click Here

    https://youtu.be/wZUsRnc7p5Y

    ಅವರು ಶುಕ್ರವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕುಂದಗನ್ನಡದ ಮೇಲಿನ ಪ್ರೀತಿಯಿಂದ ಸಾಮಾಜಿಕ ಮಾಧ್ಯಮದಲ್ಲಿ ಹುಟ್ಟಿದ ಅಭಿಮಾನದ ಕಿಡಿಯೊಂದು ಇಂದು ವಿಶ್ವದಗಲ ಹಬ್ಬಿರುವ ಪರಿಯು ಭಾಷೆಯೊಂದರ ಅಪರಿಮಿತ ಸಾಧ್ಯತೆಯನ್ನು ಎತ್ತಿಹಿಡಿಯುತ್ತದೆ. ಸಮಾನಮನಸ್ಕ ಗೆಳೆಯರ ಸಾರಥ್ಯದಲ್ಲಿ ಆಯೋಜನೆಯಾಗುತ್ತಾ ಬಂದ ಈ ದಿನಾಚರಣೆಯು ಈ ಬಾರಿ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿದೆ. ಕುಂದಾಪ್ರ ಕನ್ನಡ ಭಾಷೆಯೆಂಬುದು ಕುಂದಾಪುರ ನೆಲಮೂಲದ ಭಾಷಾ ಸಂಪತ್ತು, ಆಚಾರ-ವಿಚಾರ, ಕಲೆ, ಕ್ರೀಡೆ, ವೈವಿಧ್ಯಮಯ ಆಹಾರ ಮುಂತಾದ ಕುಂದಾಪುರ ಜನಜೀವನ, ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ ಸಾರುವ ಜೊತೆಗೆ ಇಲ್ಲಿ ನೆಲೆಸಿರುವ ಕುಂದಗನ್ನಡಿಗರ ಅಪರೂಪದ ಸಮ್ಮಿಲನಕ್ಕೆ ವೇದಿಕೆ ಕಲ್ಪಿಸುವ ಉತ್ಸವವಾಗಿರುತ್ತದೆ. ಬೆಂಗಳೂರಿನಲ್ಲಿ ಲಕ್ಷಾಂತರ ಕುಂದಗನ್ನಡಿಗರಿದ್ದು ತಮ್ಮ ತಾಯಿಬೇರಿನ ಜೊತೆಗಿನ ಅನುಬಂಧವನ್ನು ಕಡಿದುಕೊಳ್ಳದೆ ಜತನದಿಂದ ಕಾಪಿಟ್ಟುಕೊಂಡಿದ್ದಾರೆ. ಇವರೆಲ್ಲರನ್ನೂ ಒಂದೇ ಸೂರಿನಡಿ ನೋಡುವ, ಅಪರೂಪದ ಕಲಾವಿದರಿಗೆ ವೇದಿಕೆ ಕೊಡುವ, ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಮೆಲುಕು ಹಾಕುವ ಹಾಗು ಸಂಸ್ಕೃತಿ ವಿನಿಮಯದಂತಹ ಸದುದ್ದೇಶವನ್ನು ಕುಂದಾಪ್ರ ಕನ್ನಡ ಹಬ್ಬವು ಹೊಂದಿದೆ ಎಂದರು.

    ಉದ್ಘಾಟನೆ:
    ಜುಲೈ 23ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮವನ್ನು ಕರಾವಳಿಯ ಜನಪದ ಕ್ರೀಡೆಯಾದ ಕಂಬಳ ಕ್ಷೇತ್ರದ ಸಾಧಕರಾದ ಶಾಂತರಾಮ ಶೆಟ್ಟಿ ಬಾರ್ಕೂರು ಇವರು ಉದ್ಘಾಟಿಸಲಿದ್ದು ಶಾಸಕರಾದ ಕಿರಣ್ ಕೊಡ್ಗಿ ಮತ್ತು ಗುರುರಾಜ್ ಗಂಟಿಹೊಳೆಯವರ ಸಮ್ಮುಖದಲ್ಲಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ದೊರಕಲಿದೆ.

    ಸಮಾರೋಪದಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿ:
    ಸಂಜೆ 4.30 ಕ್ಕೆ ಸಮಾರೋಪ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರ ಘನ ಉಪಸ್ಥಿತಿ ಇರಲಿದ್ದು ಶಾಸಕರಾದ ಎಂ.ಕೃಷ್ಣಪ್ಪ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ ಹೆಗ್ಡೆಯವರು, ಬಂಟರ ಸಂಘ ಬೆಂಗಳೂರು ಇದರ ಅಧ್ಯಕ್ಷರಾದ ಎಂ.ಮುರಳೀಧರ ಹೆಗ್ಡೆಯವರ ಗೌರವ ಉಪಸ್ಥಿತಿ ಇರಲಿದೆ. ಇದೇ ಸಂದರ್ಭದಲ್ಲಿ ಕುಂದಾಪುರದ ಹಿರಿಮೆಯನ್ನು ಇನ್ನಷ್ಟು ವಿಸ್ತರಿಸಿದ ನಮ್ಮೂರಿನ ಸಾಧಕರಾದ ಪ್ರೊ ಶ್ರೀ ಎ.ವಿ ನಾವಡ ಮತ್ತು ಸಂಗೀತ ನಿರ್ದೇಶಕರಾದ ಶ್ರೀ ರವಿ ಬಸ್ರೂರು ಇವರುಗಳು ಊರ ಗೌರವಕ್ಕೆ ಭಾಜನರಾಗಲಿದ್ದಾರೆ. ಖ್ಯಾತ ಚಿತ್ರ ನಟ ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ಹಾಗು ಇನ್ನಿತರರು ಕಾರ್ಯಕ್ರಮದ ಮೆರಗು ಹೆಚ್ಚಿಸಲಿದ್ದಾರೆ.

    ಸಾಂಸ್ಕೃತಿಕ ಮೆರಗು
    ಕುಂದಾಪ್ರ ಕನ್ನಡ ಹಬ್ಬವು ಹಲವು ಸಾಂಸ್ಕೃತಿಕ ಸಡಗರಗಳಿಗೆ ವೇದಿಕೆಯಾಗಲಿದ್ದು ಮುಖ್ಯವಾಗಿ ರಾಘವೇಂದ್ರ ಜನ್ಸಾಲೆಯವರ ನೇತೃತ್ವದಲ್ಲಿ ಸಿದ್ಧಪ್ರಸಿದ್ಧ ಕಲಾವಿದರಿಂದ ಬೇಡರ ಕಣ್ಣಪ್ಪ ಎನ್ನುವ ಯಕ್ಷಗಾನ ಪ್ರಸಂಗ, ಕಲಾಕದಂಬ ಆರ್ಟ್ಸ್ ಅವರಿಂದ ವೀರ ಬರ್ಬರಿಕ ಯಕ್ಷಗಾನ ಪ್ರಸಂಗ, ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ಬಿಡುವನೇ ಬ್ರಹ್ಮಲಿಂಗ!? ಎನ್ನುವ ನೃತ್ಯ ರೂಪಕ, ಕಿರುತೆರೆಯ ಖ್ಯಾತಿಯ ಶ್ರಾವ್ಯ ಮರವಂತೆ, ಸಮೃದ್ಧಿ ಕುಂದಾಪುರ, ಪ್ರೀತಂ ಅವರುಗಳು ಚಿತ್ರಪಟ ರಾಮಾಯಣ ಎಂಬ ಕಿರುನಾಟಕದ ಮೂಲಕ ರಂಜಿಸಲಿದ್ದಾರೆ. ಸಾಸ್ತಾನದ ಖ್ಯಾತ ನಾಟಕ ತಂಡ ಅಲ್ವಿನ್ ಅಂದ್ರಾದೆ ಮತ್ತು ಸಹಕಲಾವಿದರ ತಿಳಿ ಹಾಸ್ಯ ಪ್ರಹಸನ, ಟೀಂ ಕುಂದಾಪುರಿಯನ್ಸ್ ಅವರು ಮಿಂಚುಳ- ಇದ್ ಕತ್ಲಿ-ಬೆಳಗಿನ ಕಥಿ ಎಂಬ ವಿಶೇಷ ನಾಟಕವನ್ನು ನೆರೆದವರಿಗೆ ಕುಂದಾಪ್ರ ಕನ್ನಡ ಭಾಷೆಯ ಸೊಬಗನ್ನು ಮತ್ತು ಕನಸ್ಸಿನ ಕುಂದಾಪುರ ಕುರಿತಾಗಿ ಪ್ರದರ್ಶಿಸಲಿದ್ದಾರೆ.

    Click here

    Click here

    Click here

    Call us

    Call us

    ನುಡಿ ಚಾವಡಿ, ಲಘು ಹಾಸ್ಯ:
    ಹಿರಿಯರಾದ ರೇಖಾ.ಬಿ.ಬನ್ನಾಡಿ, ಉಪೇಂದ್ರ ಶೆಟ್ಟಿ, ಕವಿ ಹೆಚ್.ಡುಂಡಿರಾಜ್ ಅವರ ಭಾಷೆಯ ಬಹು ಆಯಾಮದ ಬಗ್ಗೆ ಮಾತು- ನುಡಿ ಚಾವಡಿ, ಜನಪ್ರಿಯ ಗಾಯಕರನ್ನೊಳಗೊಂಡ ಸ್ವರ ಕುಂದಾಪುರ ತಂಡದ ಕಾಡುವ ಹಾಡುಗಳ ಕಲರವ, ಕುಂದಾಪ್ರ ಕನ್ನಡದ ಖ್ಯಾತ ವಾಗ್ಮಿ ಮನು ಹಂದಾಡಿಯವರ ಲಘು ದಾಟಿಯ ಬಿಗು ಭಾಷಣ ಹಾಗು ಇನ್ನಿತರ ಮನರಂಜನೀಯ ಕಾರ್ಯಕ್ರಮಗಳು ಈ ಬಾರಿಯ ಕುಂದಾಪ್ರ ಕನ್ನಡ ಹಬ್ಬವನ್ನು ಅವಿಸ್ಮರಣೀಯಗೊಳಿಸಲಿವೆ.

    ಬಯಲಾಟ:
    ಕರಾವಳಿಯ ಅಪರೂಪದ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಲಾಗಿದ್ದು ವಯಸ್ಕರರಿಗಾಗಿ ಹಗ್ಗ ಜಗ್ಗಾಟ, ದಂಪತಿಗಳಿಗಾಗಿ ಪ್ರತ್ಯೇಕ ಕ್ರೀಡೆಗಳು, ಮಕ್ಕಳಿಗೆ ಹೂವಾಡಗಿತ್ತಿ, ಸೈಕಲ್ ಟೈರ್ ಓಟ, ಹಣೆಬೊಂಡ ಓಟ, ಗಿರ್ಗಿಟ್ಲಿ ಓಟ, ಚಿತ್ರಕಲೆ, ಮಹಿಳೆಯರಿಗೆ ಹಲಸಿನ ಕೊಟ್ಟೆ ಕಟ್ಟುವುದು, ಮಡ್ಲ್ ನೆಯ್ಯುವುದು ಇನ್ನಿತರ ಸ್ಪರ್ಧೆಗಳು ಹಬ್ಬದ ಬಯಲಿನ ಕಲರವವನ್ನು ಇಮ್ಮಡಿಸಲಿದೆ.

    ಖಾದ್ಯದ ಆಕರ್ಷಣೆ:
    ಕುಂದಾಪುರದ ನುರಿತ ಬಾಣಸಿಗರು ಸ್ಥಳದಲ್ಲೇ ತಯಾರಿಸುವ ಹಾಲುಬಾಯಿ, ಕೊಟ್ಟೆ ಕಡುಬು, ಗೋಲಿಬಜೆ, ಬನ್ಸ್, ಸುಕ್ಕಿನ್ ಉಂಡೆ, ಎಳ್ ಬಾಯ್ರ್, ಹೆಸ್ರು ಬಾಯ್ರ್ ನಂತಹ ವಿವಿಧ ಪಾನಕಗಳು, ಹಬ್ಬದ ವಿಶೇಷ ತರಕಾರಿ ಊಟ, ಇಡ್ಲಿ ಕುಂದಾಪ್ರ ಕೋಳಿ ಸುಕ್ಕ, ಬರಿಯಾನಿ, ಚಟ್ಲಿ ಸಾರು ಇನ್ನಿತರ ಅಪರೂಪದ ಖಾದ್ಯಗಳು ಕುಂದಾಪ್ರ ಕನ್ನಡ ಹಬ್ಬಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಲು ಮತ್ತಷ್ಟು ಆಕರ್ಷಣೆಯಾಗಲಿವೆ ಎಂದು ತಿಳಿಸಿದರು.

    ಮಾಧ್ಯಮಗೋಷ್ಠಿಯಲ್ಲಿ ಗೌರವಾಧ್ಯಕ್ಷ ಪ್ರಮೋದಚಂದ್ರ ಶೆಟ್ಟಿ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ ಶೆಟ್ಟಿ ಹಾಲಾಡಿ ಹಾಗೂ ಜೊತೆ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.