ನಂದಿನಿ ಹಾಲಿನ ಖರೀದಿ ದರ ಹೆಚ್ಚಳ ನಿರ್ಣಯದಿಂದ ಹೈನುಗಾರಿಕೆಗೆ ಬಲ – ಎಸ್. ಪ್ರಕಾಶ್ಚಂದ್ರ ಶೆಟ್ಟಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೆಎಂಎಫ್ ಉತ್ಪನ್ನವಾದ ನಂದಿನಿ ಹಾಲು ಖರೀದಿ ದರವನ್ನು ಪ್ರತಿ ಲೀಟರಿಗೆ ರೂ.3 ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿರುವುದು ರಾಜ್ಯದ ಹೈನುಗಾರರಿಗೆ ಬಲ ತುಂಬಿದಂತಾಗಿದೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುವುದಾಗಿ ದ.ಕ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ, ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ.

Call us

Click Here

ಅವಿಭಜಿತ ದಕ ಜಿಲ್ಲೆಯಲ್ಲಿ ಸುಮಾರು 65 ಸಾವಿರ ಹೈನುಗಾರರಿಂದ ಹಾಲು ಶೇಖರಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ ಪಶು ಆಹಾರದ ಬೆಲೆಯನ್ನು ಹೆಚ್ಚಿಸಲಾಗಿತ್ತು ಆದರೆ ಅದಕ್ಕೆ ತಕ್ಕಂತೆ ಹಾಲು ಖರೀದಿ ದರ ಏರಿಕೆಯಾಗಿರಲಿಲ್ಲ. ಪಶುಪಾಲನೆಯ ಸಂಕಷ್ಟದ ಜೊತೆಗೆ ಹಾಲಿಗೆ ಸರಿಯಾದ ಧಾರಣೆ ಸಿಗದಿರುವುದರಿಂದ ರೈತರು ಕಂಗಾಲಾಗಿದ್ದು, ತಮ್ಮ ಜಾನುವಾರುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೆಎಂಎಫ್ ಖರೀದಿ ದರವನ್ನು ರೂ.5ಕ್ಕೆ ಏರಿಸುವ ಬೇಡಿಕೆ ಇರಿಸಿದ್ದು, ಸದ್ಯ ರೂ.3 ಏರಿಸಲು ನಿರ್ಣಯಿಸಲಾಗಿದೆ. ಇದು ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಪ್ರೋತ್ಸಾಹಿಸಿದಂತಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿ ಒಕ್ಕೂಟದ ಪ್ರಸ್ತಾವನೆಯ ಬಗ್ಗೆ ಮಹತ್ವದ ಚರ್ಚೆಯನ್ನು ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಲ್ಲದೇ ನಂದಿನಿ ಹಾಲಿನ ಪುಡಿಯ ದರವನ್ನು ಹೆಚ್ಚಿಸುವ ಬಗ್ಗೆ ಭರವಸೆ ನೀಡಿದ್ದಾರೆ. ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರಿಗೂ ಒಕ್ಕೂಟದ ನಿರ್ದೇಶಕನಾಗಿ ಕೃತಜ್ಞತೆ ಸಲ್ಲಿಸುವುದಾಗಿ ಎಸ್. ಪ್ರಕಾಶ್ಚಂದ್ರ ಶೆಟ್ಟಿ ತಿಳಿಸಿದ್ದಾರೆ.

Leave a Reply