ಜುಲೈ 25ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜು.24:
ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪಿಯು ಕಾಲೇಜುಗಳ ವಿದ್ಯಾರ್ಥಿಗಳಿಗೆ ಜುಲೈ 25ರ ಮಂಗಳವಾರ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

Call us

Click Here

ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳ ಜೊತೆಗೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌ ಮತ್ತು ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಆದೇಶಿಸಿದ್ದಾರೆ. ಜುಲೈ 24ರಂದು ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಜುಲೈ 25ಕ್ಕೂ ಮುಂದುವರಿಸಲಾಗಿದೆ. ಮಂಗಳೂರು ವಿವಿಯಿಂದ ನಡೆಯಬೇಕಿದ್ದ ಮಂಗಳವಾರದ ಪರೀಕ್ಷೆಯನ್ನೂ ಮುಂದೂಡಲಾಗಿದೆ.

ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳ ತೋಡುಗಳು ತುಂಬಿ ಹರಿಯುತ್ತಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

Leave a Reply