ಜುಲೈ 27ರಂದು ಉಡುಪಿ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜು.26:
ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪಿಯು ಕಾಲೇಜುಗಳ ವಿದ್ಯಾರ್ಥಿಗಳಿಗೆ ಜುಲೈ 27ರ ಗುರುವಾರ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

Call us

Click Here

ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಆದೇಶಿಸಿದ್ದಾರೆ. ಜುಲೈ 24ರಿಂದ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಜುಲೈ 27ಕ್ಕೂ ಮುಂದುವರಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌ ಮತ್ತು ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿಲ್ಲ. ಆದರೆ ಹಾಜರಾತಿ ಕಡ್ಡಾಯವಲ್ಲ. ತರಗತಿಗೆ ಹಾಜರಾಗುವವರು ಮಂಜಾಗರೂಕತೆ ವಹಿಸುವಂತೆ ಸೂಚಿಸಲಾಗಿದೆ.

Leave a Reply