ಮಳೆ ಆರ್ಭಟ: ಉಡುಪಿ ಜಿಲ್ಲೆಯಲ್ಲಿ 28 ಕೋಟಿ ನಷ್ಟ – ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ಉಡುಪಿ ಜಿಲ್ಲೆಯಾದ್ಯಂತ ಮಳೆ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

Call us

Click Here

ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದದಲ್ಲಿ ಸಚಿವರು ಪಾಲ್ಗೊಂಡರು.

ಬಳಿಕ ಮಾತನಾಡಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಮಳೆಯಿಂದ ಅನಾಹುತಗಳು ಸಂಭವಿಸುತ್ತಿವೆ. ಉಡುಪಿ ಜಿಲ್ಲೆಯಲ್ಲಿ ಬಹಳ ಮೊದಲೇ ವಾರ್ ರೂಂಗಳನ್ನು ತೆರೆಯಲಾಗಿತ್ತು. ಇದರಿಂದ ಸಾಕಷ್ಟು ಅನಾಹುತಗಳನ್ನು ತಪ್ಪಿಸಿದ್ದೇವೆ. ಆದರೆ ಮಳೆ ಅಪಘಾತಗಳಿಂದ 9 ಸಾವು ಸಂಭವಿಸಿದೆ ಎಂದು ಸಚಿವರು ಮಾಹಿತಿ ನೀಡಿದರು. ಇದಕ್ಕೆ ಪ್ರತಿಯಾಗಿ ಇನ್ಮುಂದೆ ಇಂಥ ಯಾವುದೇ ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು, ಶೀಘ್ರವೇ ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಸಚಿವರು ಹೇಳಿದರು.

► ಪ್ರೇಕ್ಷಣೀಯ ಸ್ಧಳಗಳಲ್ಲಿ ನಿಯಮ ಮೀರಿ, ಮೋಜು ಮಸ್ತಿ ಮಾಡಿದರೆ ಕಾನೂನು ಕ್ರಮ – ಡಿಸಿ ಎಚ್ಚರಿಕೆ https://kundapraa.com/?p=68036 .

Click here

Click here

Click here

Click Here

Call us

Call us

Leave a Reply