ಖಾಸಗಿ ವೀಡಿಯೋ ಸೆರೆ ಪ್ರಕರಣ: ವದಂತಿ ನಂಬಬೇಡಿ, ಪ್ರಜ್ಞಾವಂತ ನಾಗರಿಕರಂತೆ ವರ್ತಿಸೋಣ – ಖುಷ್ಬೂ ಸುಂದರ್ ಮನವಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಕಾಲೇಜಿನಲ್ಲಿ ಖಾಸಗಿ ವೀಡಿಯೋ ಸೆರೆಯಾಗಿರುವ ಪ್ರಕರಣಕ್ಕೆ ಸಂಭಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು ಉಡುಪಿಯ ಖಾಸಗಿ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿದ್ದಾರೆ.

Call us

Click Here

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣದಕ್ಕೆ ಸಂಬಂಧಿಸಿದಂತೆ ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದು, ಈಗಲೇ ಏನನ್ನು ಹೇಳಲು ಸಾಧ್ಯವಿಲ್ಲ ಅಥವಾ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಯಾವುದೇ ವದಂತಿಗಳಿಗೆ ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ ಎಂದರು.

ಮಾಧ್ಯಮದವರಿಗೂ ಚಾಟಿ ಬೀಸಿದ ಖುಷ್ಬೂಅವರು, ನಾವು ಯಾರನ್ನು ಮಾತನಾಡಿಸುತ್ತೇವೆ ಎಲ್ಲಿಗೆ ಹೋಗುತ್ತೇವೆ ಎಂದು ಹಿಂಬಾಲಿಸಬೇಡಿ. ಇನ್ನು ನಮಗೆ ನಮ್ಮ ಕೆಲಸ ಮಾಡಲು ಬಿಡಿ. ಎನ್ ಸಿಡಬ್ಲ್ಯೂ ಪರವಾಗಿ ನಾನು ಬಂದಿದ್ದೇನೆ. ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಎಲ್ಲವನ್ನೂಮೊದಲೇ ಹೇಳಲು ಯಾವುದೇ ಬ್ರೇಕಿಂಗ್ ನ್ಯೂಸ್ ವಿಷಯವಲ್ಲ. ಇದು ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸಂಬಂಧಿಸಿದ ವಿಚಾರ. ಇದು ಎರಡು ನಿಮಿಷದ ನೂಡಲ್ಸ್ ಥರ ಅಲ್ಲ ಎಂದರು.

ಪೊಲೀಸರ ಹೇಳಿಕೆ ಹೊರತಾಗಿ ಸದ್ಯ ಜನರು ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ. ಮಾಹಿತಿ ಸಂಗ್ರಹಕ್ಕೆ ನಮಗೆ ಇನ್ನು ಸ್ವಲ್ಪ ಸಮಯಬೇಕು. ಎಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ವರ್ತಿಸಬೇಕೆಂದು ಪ್ರಾಮಾಣಿಕವಾಗಿ ಕೋರುತ್ತೇನೆ. ಯಾವುದೇ ವದಂತಿಗಳಿಗೆ ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ. ನಾವೇ ಸರಿಯಾದ ಮಾಹಿತಿಯನ್ನು ನೀಡುತ್ತೇವೆ. ಸಂಬಂಧಪಟ್ಟ ಫೋನ್ ಗಳು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ ಎಂದರು.

ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ ಎಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ. ಪೊಲೀಸರ ಜೊತೆಗೆ ನಾವು ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ಪೊಲೀಸರ ಸಹಕಾರದೊಂದಿಗೆ ನಮ್ಮ ತನಿಖೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

Click here

Click here

Click here

Click Here

Call us

Call us

Leave a Reply